ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ

Delhi: ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಎಲ್​ಪಿಜಿ ಸಿಲಿಂಡರ್​ ಸ್ಫೋಟಕ್ಕೆ ಕುಸಿದು ಬಿದ್ದ ಮನೆ; ಮಹಿಳೆ ಸೇರಿ ನಾಲ್ವರು ಸಾವು, ಒಬ್ಬರಿಗೆ ಗಂಭೀರ ಗಾಯ
ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಬಿದ್ದಿದೆ
Follow us
TV9 Web
| Updated By: Lakshmi Hegde

Updated on: Jul 01, 2021 | 9:04 AM

ನವದೆಹಲಿ: ಇಲ್ಲಿನ ಶಹದಾರಾದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಎಲ್​​ಪಿಜಿ ಸಿಲಿಂಡರ್​ ಸ್ಫೋಟಗೊಂಡು ಮಹಿಳೆ ಸೇರಿ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್​ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ನಂದಿಸಲು 9 ಅಗ್ನಿಶಾಮಕ ದಳಗಳು ಸ್ಥಳಕ್ಕೆ ತೆರಳಿದ್ದವು. ಸಿಲಿಂಡರ್ ಸ್ಫೋಟದಿಂದ ಒಂದು ಮನೆ ಭಾಗಶಃ ಕುಸಿದುಬಿದ್ದಿದೆ. ಐವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನಿ ದೇವಿ (45), ನರೇಶ್​ (22), ಓಂ ಪ್ರಕಾಶ್ (20) ಮತ್ತು ಸುಮನ್​ (18) ಮೃತರು. ಇವರಲ್ಲಿ ಮೂವರು ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಇನ್ನು ಲಾಲ್​ ಚಾಂದ್​ (29) ಎಂಬುವರಿಗೂ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಸಂಬಂಧ ತನಿಖೆ ಶುರುವಾಗಿದೆ.

ಸದ್ಯ ಕುಸಿದು ಬಿದ್ದಿರುವ ಮನೆಯ ಎದುರು ಒಂದು ಭಾಗದಲ್ಲಿ ಗ್ಯಾಸ್​ ಸ್ಟವ್​ ದುರಸ್ತಿ ಅಂಗಡಿ ಇತ್ತು. ಅಲ್ಲೇ ಸಿಲಿಂಡರ್ ಸ್ಫೋಟಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಮನೆಯ ಬಾಗಿಲು-ಕಿಟಕಿಗಳನ್ನು ಮುರಿದು ಐವರನ್ನೂ ಹೊರಗೆ ಕರೆತಂದರು. ಆದರೂ ಅಷ್ಟರಲ್ಲಾಗಲೇ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಬೆಂಕಿಯೂ ಆವರಿಸಿತ್ತು. ಇದರಿಂದಾಗಿ ಅವರಿಗೆ ಉಸಿರಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಪೊಲೀಸ್​ ಅಧಿಕಾರಿ ಸತ್ಯಸುಂದರಂ ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಜುಲೈ ತಿಂಗಳ ಆರಂಭದಲ್ಲಿ ಗ್ರಾಹಕರಿಗೆ ಖುಷಿ ಸುದ್ದಿ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

(LPG cylinder explosion kills four in Delhi)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ