LPG Cylinder Price Hike: ಇಂದು ಮಧ್ಯರಾತ್ರಿಯಿಂದಲೇ ಅಡುಗೆ ಅನಿಲ ಸಿಲಿಂಡರ್ ತುಟ್ಟಿ
ಪೆಟ್ರೋಲ್ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.
ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ಲಾಕ್ಡೌನ್ ಅವಧಿಯಲ್ಲಿ ತೈಲ ಬೆಲೆ ಯಾವುದೇ ಏರಿಳಿತ ಕಂಡಿರಲಿಲ್ಲ. ಆದರೆ, ಲಾಕ್ಡೌನ್ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಹೆಚ್ಚಿಸುತ್ತಿದೆ. ಈಗಾಗಲೇ ಲೀಟರ್ ಪೆಟ್ರೋಲ್ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದೆ. ಈಗ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್ಗೆ 50 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ.
ನಾಳೆಯಿಂದ ಪ್ರತಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 769 ರೂಪಾಯಿ ಆಗಲಿದೆ. ಈ ಮೊದಲು 722 ರೂಪಾಯಿ ಇತ್ತು. ರಾಜ್ಯದಿಂದ ರಾಜ್ಯಕ್ಕೆ ಈ ದರ ಭಿನ್ನವಾಗಿರಲಿದೆ.
2020ರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿತ್ತು. ಜೂನ್, ಜುಲೈನಲ್ಲಿ ಮತ್ತೆ ಏರಿಕೆ ಕಂಡಿದ್ದ ದರ, ನಂತರ ನಾಲ್ಕು ತಿಂಗಳು ಯಾವುದೇ ಬದಲಾವಣೆ ಕಂಡಿರಲಿಲ್ಲ. 2021ರ ಜನವರಿ ತಿಂಗಳಲ್ಲಿ ಪ್ರತಿ ಸಿಲಿಂಡರ್ ದರ 100 ರೂಪಾಯಿ ಏರಿಕೆ ಆಗಿತ್ತು.
Price of LPG gas cylinder (14.2 kg domestic cylinder) hiked by Rs 50 per cylinder; to be at Rs 769 per cylinder in Delhi from 12 am tomorrow.
— ANI (@ANI) February 14, 2021
ಪೆಟ್ರೋಲ್ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗಲೇ ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಬಗ್ಗೆ ಸಾಮಾನ್ಯರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Petrol Price Today: ಸತತ 6ನೇ ದಿನವೂ ಏರಿಕೆ ಕಂಡ ಪೆಟ್ರೋಲ್ ದರ; 29 ಪೈಸೆ ಹೆಚ್ಚಳ
Published On - 9:59 pm, Sun, 14 February 21