AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ಅಮೆರಿಕ ಮತ್ತು ಇರಾನ್ ನಡುವಿನ ಕದನವಿರಾಮದ ಬಳಿಕ ಭಾರತದ ಎಲ್​ಪಿಜಿ ಟ್ಯಾಂಕರ್ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿದೆ. ಈ ಹಡಗು ಏಪ್ರಿಲ್ 15ರಂದು ಮುಂಬೈ ತಲುಪುವ ನಿರೀಕ್ಷೆಯಿದೆ. ಎಲ್‌ಪಿಜಿ ವಾಹಕ ಜಗ ವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ದಾಟಿದ್ದು, ಬುಧವಾರ ಅಮೆರಿಕ-ಇರಾನ್ ಕದನ ವಿರಾಮ ಜಾರಿಗೆ ಬಂದ ನಂತರ ಈ ಸಾಧನೆ ಮಾಡಿದ ಮೊದಲ ಭಾರತ ಧ್ವಜ ಹೊತ್ತ ಹಡಗು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್
Jag Vikram
ಸುಷ್ಮಾ ಚಕ್ರೆ
|

Updated on: Apr 11, 2026 | 10:12 PM

Share

ನವದೆಹಲಿ, ಏಪ್ರಿಲ್ 11: ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗು ಜಗವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಈ ಹಡಗು ಸುಮಾರು 20,400 ಮೆಟ್ರಿಕ್ ಟನ್ ಎಲ್‌ಪಿಜಿ ಸರಕುಗಳನ್ನು 24 ನಾವಿಕರೊಂದಿಗೆ ಸಾಗಿಸುತ್ತಿದೆ. ಇದು ಏಪ್ರಿಲ್ 15ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕದನ ವಿರಾಮಕ್ಕೆ ಕೆಲವು ವಾರ ಮೊದಲು ಭಾರತ ಧ್ವಜ ಹೊತ್ತ 8 ಹಡಗುಗಳು ಜಲಸಂಧಿಯನ್ನು ದಾಟಿದ್ದವು. ಆದರೆ, 15 ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಕೊಂಡಿವೆ. ಜಗವಿಕ್ರಮ್ 20,400 ಟನ್ ಎಲ್‌ಪಿಜಿಯನ್ನು ಹೊತ್ತೊಯ್ಯುತ್ತಿದ್ದು, 24 ನಾವಿಕರು ಅದರಲ್ಲಿ ಸಿಲುಕಿಕೊಂಡಿದ್ದರು. ಇದು ಏಪ್ರಿಲ್ 15ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ಹಡಗು ಟ್ರ್ಯಾಕಿಂಗ್ ದತ್ತಾಂಶವು ಶುಕ್ರವಾರ ರಾತ್ರಿಯಿಂದ ಇಂದು ಬೆಳಿಗ್ಗೆಯವರೆಗೆ ಟ್ಯಾಂಕರ್ ಹಾರ್ಮುಜ್ ಜಲಮಾರ್ಗದ ಮೂಲಕ ಚಲಿಸಿದೆ. ಮಾರ್ಚ್ ಆರಂಭದಿಂದಲೂ ಪರ್ಷಿಯನ್ ಕೊಲ್ಲಿಯಿಂದ ನಿರ್ಗಮಿಸುವ 9ನೇ ಭಾರತೀಯ ಹಡಗು ಜಗವಿಕ್ರಮ್ ಆಗಿದೆ. ಆದರೆ ಸುಮಾರು 15 ಭಾರತ-ಧ್ವಜ ಹೊಂದಿರುವ ಹಡಗುಗಳು ಈ ಪ್ರದೇಶದಲ್ಲಿ ಬಾಕಿ ಉಳಿದಿದ್ದು, ಮಾರ್ಗಕ್ಕಾಗಿ ಕಾಯುತ್ತಿವೆ.

ಇದನ್ನೂ ಓದಿ: ಇರಾನ್ ದಿಗ್ಬಂಧನದ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ದಾಟಿದ 8 ಭಾರತೀಯ ಹಡಗು

ಭಾರತವು ತನ್ನ ಕಚ್ಚಾ ತೈಲದ ಸುಮಾರು ಶೇ. 88ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ ಮತ್ತು ನಾಲ್ಕನೇ ಅತಿದೊಡ್ಡ ಅನಿಲ ಬಳಕೆದಾರ ರಾಷ್ಟ್ರವಾದ ಭಾರತವು ತನ್ನ ಕಚ್ಚಾ ತೈಲದ ಸುಮಾರು ಶೇ. 88ರಷ್ಟನ್ನು, ಅದರ ನೈಸರ್ಗಿಕ ಅನಿಲ ಅಗತ್ಯಗಳಲ್ಲಿ ಅರ್ಧದಷ್ಟು ಮತ್ತು ಅದರ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಅವಶ್ಯಕತೆಯ ಸುಮಾರು ಶೇ. 60ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಕಚ್ಚಾ ತೈಲ ಆಮದುಗಳಲ್ಲಿ ಅರ್ಧಕ್ಕಿಂತ ಹೆಚ್ಚು, ಅನಿಲದ ಸುಮಾರು ಶೇ. 40ರಷ್ಟು ಮತ್ತು ಎಲ್‌ಪಿಜಿ ಸಾಗಣೆಯ ಶೇ. 85-90ರಷ್ಟು ಗಲ್ಫ್ ದೇಶಗಳಿಂದ ಬರುತ್ತವೆ. ಇವು ಪಶ್ಚಿಮ ಏಷ್ಯಾ ಸಂಘರ್ಷದ ಸಮಯದಲ್ಲಿ ಮುಚ್ಚಲ್ಪಟ್ಟ ಪ್ರಮುಖ ಜಾಗತಿಕ ಇಂಧನ ಕಾರಿಡಾರ್ ಆಗಿರುವ ಹಾರ್ಮುಜ್ ಜಲಸಂಧಿಯ ಮೂಲಕ ಹಾದು ಹೋಗುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ