AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವದಂತಿ: ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಪಂಜಾಬ್‌ನ ಎಲ್‌ಪಿಯು ಕ್ಯಾಂಪಸ್ ಧ್ವಂಸ

ಎಲ್‌ಪಿಯು ಕ್ಯಾಂಪಸ್‌ನಲ್ಲಿ ಅತ್ಯಾಚಾರ ವದಂತಿ ಹಿನ್ನೆಲೆಯಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಸಾವಿರಾರು ವಿದ್ಯಾರ್ಥಿಗಳು ಆಕ್ರೋಶಗೊಂಡು ಆಸ್ತಿ ನಾಶಪಡಿಸಿ ಚಂಡೀಗಢ-ಅಮೃತಸರ ಹೆದ್ದಾರಿ ತಡೆದರು. ಪೊಲೀಸರು ವದಂತಿಗಳನ್ನು ಅಲ್ಲಗಳೆದಿದ್ದು, ಯಾವುದೇ ಅತ್ಯಾಚಾರ ನಡೆದಿಲ್ಲ ಅಥವಾ ದೂರು ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೈಬರ್ ಸೆಲ್ ಸುಳ್ಳು ಸುದ್ದಿ ಹರಡಿದವರ ವಿರುದ್ಧ ತನಿಖೆ ನಡೆಸುತ್ತಿದೆ. ಭದ್ರತಾ ಲೋಪಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಸಮಾಧಾನವಿತ್ತು.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವದಂತಿ: ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಪಂಜಾಬ್‌ನ ಎಲ್‌ಪಿಯು ಕ್ಯಾಂಪಸ್ ಧ್ವಂಸ
ವಿದ್ಯಾರ್ಥಿಗಳುImage Credit source: X Account Fletcher
ನಯನಾ ರಾಜೀವ್
|

Updated on: Sep 27, 2026 | 1:07 PM

Share

ಅಮೃತಸರ, ಸೆಪ್ಟೆಂಬರ್ 27: ಪಂಜಾಬ್‌ನ ಫಾಗ್ವಾರಾದಲ್ಲಿರುವ ಪ್ರಸಿದ್ಧ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ (LPU) ಕ್ಯಾಂಪಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಭಾರಿ ಗದ್ದಲ ನಡೆದಿದೆ. ಹೊರಗಿನ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ದೃಢೀಕರಿಸದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡಿದ ಬೆನ್ನಲ್ಲೇ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ:

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಧ್ಯರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಬಾಲಕಿಯರ ಹಾಸ್ಟೆಲ್ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರು ಆಡಳಿತ ಮಂಡಳಿಯ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ಆರಂಭಿಸಿದರು. ನೋಡನೋಡುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರ್ಪಡೆಗೊಂಡು ಕ್ಯಾಂಪಸ್‌ನಲ್ಲಿ ವಿಧ್ವಂಸಕ ಕೃತ್ಯ ನಡೆಸಿದರು.

ಕಿಟಕಿ ಗಾಜುಗಳು, ಕುಂಡಗಳು ಮತ್ತು ಪೀಠೋಪಕರಣಗಳನ್ನು ಪುಡಿಮಾಡಲಾಯಿತು. ಆವರಣದಲ್ಲಿದ್ದ ಕೆಲವು ಕಟ್ಟಡಗಳ ವಸ್ತುಗಳು ಮತ್ತು ಆಸ್ತಿಗೆ ಬೆಂಕಿ ಹಚ್ಚಲಾಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ವಿಶ್ವವಿದ್ಯಾಲಯದ ಖಾಸಗಿ ಭದ್ರತಾ ಸಿಬ್ಬಂದಿ ಅಸಹಾಯಕರಾದರು.

ಹೆದ್ದಾರಿ ತಡೆ ಮತ್ತು ಟ್ರಾಫಿಕ್ ಜಾಮ್:

ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿಶ್ವವಿದ್ಯಾಲಯದ ಮುಖ್ಯ ದ್ವಾರವನ್ನು ಮುರಿದು ಹೊರಬಂದ ಪ್ರತಿಭಟನಾಕಾರರು, ಜಲಂಧರ್-ಫಾಗ್ವಾರಾ (ಚಂಡೀಗಢ-ಅಮೃತಸರ) ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತರು. ರಸ್ತೆಯ ಮಧ್ಯೆ ಕುಳಿತು ಘೋಷಣೆ ಕೂಗಿದ್ದರಿಂದ ಹೆದ್ದಾರಿಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ವಿಡಿಯೋ

ಅತ್ಯಾಚಾರ ಸುದ್ದಿ ಕೇವಲ ವದಂತಿ ಎಂದ ಪೊಲೀಸರು:

ಘಟನಾ ಸ್ಥಳಕ್ಕೆ ಭಾರಿ ಪೊಲೀಸ್ ಪಡೆಯೊಂದಿಗೆ ಧಾವಿಸಿದ ಕಪುರ್ತಲಾ ಎಸ್‌ಎಸ್‌ಪಿ ಗೌರವ್ ತೂರ್ ವಿದ್ಯಾರ್ಥಿಗಳೊಂದಿಗೆ ಸಂಧಾನ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

“ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ದೃಢೀಕರಿಸದ ಸುಳ್ಳು ಸಂದೇಶದಿಂದ ವಿದ್ಯಾರ್ಥಿಗಳು ಪ್ರಚೋದನೆಗೊಂಡಿದ್ದಾರೆ. ಇದುವರೆಗಿನ ತನಿಖೆಯಲ್ಲಿ ಯಾವುದೇ ಅತ್ಯಾಚಾರ ಘಟನೆ ನಡೆದಿರುವುದಕ್ಕೆ ಸಾಕ್ಷ್ಯಗಳಿಲ್ಲ, ಅಥವಾ ಅಂತಹ ಯಾವುದೇ ದೂರಾಗಲಿ ನಮಗೆ ಬಂದಿಲ್ಲ. ವದಂತಿಗಳನ್ನು ನಂಬಿ ಕ್ಯಾಂಪಸ್ ಆಸ್ತಿ ನಾಶಪಡಿಸಿ ಹೆದ್ದಾರಿ ತಡೆ ನಡೆಸಿರುವುದು ಸರಿಯಲ್ಲ. ವದಂತಿ ಹಬ್ಬಿಸಿದ ಕಿಡಿಗೇಡಿಗಳ ಮೂಲವನ್ನು ಸೈಬರ್ ಸೆಲ್ ಪತ್ತೆಹಚ್ಚುತ್ತಿದೆ” ಎಂದು ಎಸ್‌ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ಕ್ಯಾಂಪಸ್ ಸುರಕ್ಷತೆ ಮತ್ತು ಆಡಳಿತದ ಮೇಲಿನ ಅಸಮಾಧಾನ: ಎಲ್‌ಪಿಯು ದೇಶ-ವಿದೇಶಗಳ ಸಾವಿರಾರು ವಿದ್ಯಾರ್ಥಿಗಳು ಕಲಿಯುವ ದೇಶದ ಅತಿದೊಡ್ಡ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ವಿದ್ಯಾರ್ಥಿಗಳ ಪ್ರಕಾರ, ಕ್ಯಾಂಪಸ್‌ನೊಳಗೆ ಹೊರಗಿನ ವ್ಯಕ್ತಿಗಳ ಪ್ರವೇಶ ನಿರ್ಬಂಧ ಮತ್ತು ಹಾಸ್ಟೆಲ್ ಸುತ್ತಮುತ್ತಲಿನ ಸಿಸಿಟಿವಿ ಕಣ್ಗಾವಲು ಹಾಗೂ ರಾತ್ರಿ ಭದ್ರತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಮೊದಲಿನಿಂದಲೂ ಆಡಳಿತದ ವಿರುದ್ಧ ಅಸಮಾಧಾನವಿತ್ತು.

ಸೈಬರ್ ಸೆಲ್‌ನಿಂದ ತನಿಖೆ: ವಾಟ್ಸಾಪ್ ಗ್ರೂಪ್‌ಗಳು, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಆಡಿಯೋ ಮತ್ತು ಮೆಸೇಜ್‌ಗಳನ್ನು ಹರಿಬಿಟ್ಟು ವಿದ್ಯಾರ್ಥಿಗಳನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ ಕಿಡಿಗೇಡಿಗಳ ವಿರುದ್ಧ ಐಟಿ ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಲು ಸೈಬರ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಹೆದ್ದಾರಿ ಸಂಚಾರ ಮುಕ್ತ: ಪೊಲೀಸರು ವಿದ್ಯಾರ್ಥಿಗಳನ್ನು ಮನವೊಲಿಸಿ ಕ್ಯಾಂಪಸ್‌ಗೆ ಕಳುಹಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕ್ಯಾಂಪಸ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು