Lt Governor: ಕೇಜ್ರಿವಾಲ್ ಸರ್ಕಾರದ ಮೇಲೆ ಮತ್ತೊಂದು ಹಗರಣದ ಆರೋಪ, ತನಿಖೆಗೆ ಆದೇಶ ನೀಡಿದ ಲೆಫ್ಟಿನೆಂಟ್ ಗವರ್ನರ್

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 24, 2022 | 3:48 PM

ಅರವಿಂದ್ ಕೇಜ್ರಿವಾಲ್ ಸರ್ಕಾರದ ಮತ್ತೊಂದು ಹಗರಣದ ಬಗ್ಗೆ ಆರೋಪ ಮಾಡಲಾಗಿದೆ. ದೆಹಲಿ ಜಲ ಮಂಡಳಿಯಲ್ಲಿ (ಡಿಜೆಬಿ) 20 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ.

Lt Governor: ಕೇಜ್ರಿವಾಲ್ ಸರ್ಕಾರದ ಮೇಲೆ ಮತ್ತೊಂದು ಹಗರಣದ ಆರೋಪ, ತನಿಖೆಗೆ ಆದೇಶ ನೀಡಿದ ಲೆಫ್ಟಿನೆಂಟ್ ಗವರ್ನರ್
Lt Governor
Follow us on

ದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಅರವಿಂದ್ ಕೇಜ್ರಿವಾಲ್ ಸರ್ಕಾರದ ಮತ್ತೊಂದು ಹಗರಣದ ಬಗ್ಗೆ ಆರೋಪ ಮಾಡಲಾಗಿದೆ. ದೆಹಲಿ ಜಲ ಮಂಡಳಿಯಲ್ಲಿ (ಡಿಜೆಬಿ) 20 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇದೀಗ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಜಲ ಮಂಡಳಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ಹೊರಡಿಸಿದ್ದಾರೆ.

ತನಿಖೆಗೆ ಶಿಫಾರಸು

ಇದಕ್ಕೂ ಮುನ್ನ, ದೆಹಲಿ ಸಾರಿಗೆ ಸಂಸ್ಥೆ (ಡಿಟಿಸಿ) 1,000 ಲೋ ಫ್ಲೋರ್ ಬಸ್‌ಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ದೂರು ಕಳುಹಿಸುವ ಪ್ರಸ್ತಾವನೆಗೆ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ್ದರು. ಸೆಪ್ಟೆಂಬರ್‌ನಲ್ಲಿ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ನಡೆಸುತ್ತಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮಗಳು ಮತ್ತು ನಕಲಿ ಶಿಕ್ಷಕರ ವೇತನ ಪಾವತಿಯಲ್ಲಿ ಹಣ ದುರುಪಯೋಗದ ಆರೋಪಗಳ ಕುರಿತು ಎಲ್‌ಜಿ ಇಲಾಖೆ ತನಿಖೆಗೆ ಆದೇಶಿಸಿದ್ದರು.

ಈ ಸಂಬಂಧ ಎಫ್‌ಐಆರ್ ದಾಖಲಿಸುವಂತೆ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಇದರೊಂದಿಗೆ ಲೆಫ್ಟಿನೆಂಟ್ ಗವರ್ನರ್ ಅವರು 15 ದಿನಗಳಲ್ಲಿ ಮುಖ್ಯ ಕಾರ್ಯದರ್ಶಿಯಿಂದ ಕ್ರಮ ಕೈಗೊಂಡ ವರದಿಯನ್ನು ಸಹ ಕೇಳಿದ್ದಾರೆ. 2012ರಿಂದ ಈ ಹಗರಣ ಆರಂಭವಾಗಿದೆ. ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವ ಕಾಲದಲ್ಲಿ ಈ ಹಗರಣ ನಡೆದಿದೆ. ಇದರಲ್ಲಿ ಕೆಲವು ಬ್ಯಾಂಕ್ ಉದ್ಯೋಗಿಗಳೂ ಸೇರಿದ್ದಾರೆ ಎಂದು ಹೇಳಲಾಗಿತ್ತು.

ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರು ದೆಹಲಿಯ ಅಬಕಾರಿ ನೀತಿಯ ಬಗ್ಗೆ ತನಿಖೆಗೆ ಶಿಫಾರಸು ಮಾಡಿದ್ದಾರೆ. ಇದಕ್ಕಾಗಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಅಂದಿನಿಂದ ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ vs ಮುಖ್ಯಮಂತ್ರಿ ನಡುವೆ ಭಾರೀ ಗುದ್ದಾಟಗಳು ಶುರುವಾಯಿತು. ಸೆಪ್ಟೆಂಬರ್‌ನಲ್ಲಿಯೂ ಲೆಫ್ಟಿನೆಂಟ್ ಗವರ್ನರ್ ಅವರು ಅರವಿಂದ್ ಕೇಜ್ರಿವಾಲ್ ವಿರುದ್ಧ 25.93 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ವಂಚನೆ ಆರೋಪದ ಮೇಲೆ ಕ್ರಮಕ್ಕೆ ಆದೇಶಿಸಿದ್ದರು, ತನಿಖೆಯ ಪ್ರಸ್ತಾವನೆಯನ್ನು ಮುಂದಕ್ಕೆ ತೆಗೆದುಕೊಂಡರು.

ಮದ್ಯದ ಹಗರಣದಿಂದ ಆರಂಭವಾದ ಆಮ್ ಆದ್ಮಿ ಪಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಜಟಾಪಟಿ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. ಇಬ್ಬರ ನಡುವೆ ನಡೆಯುತ್ತಿರುವ ಜಟಾಪಟಿ ಇದೀಗ ಹೊಸ ತಿರುವು ಪಡೆದುಕೊಂಡಿದೆ. ದೀರ್ಘಕಾಲದ ವಿವಾದದ ನಂತರ, ಈಗ ಮತ್ತೊಮ್ಮೆ ದೆಹಲಿ ಜಲ ಮಂಡಳಿಯ ವಿಷಯವು ಅದನ್ನು ಪ್ರಸ್ತಾಪಕ್ಕೆ ಬಂದಿದೆ.

 

Published On - 3:48 pm, Sat, 24 September 22