AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಜ್ರಿವಾಲ್ ಜೈಲಿನಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲ: ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್(Arvind Kejriwal) ಜೈಲಿನಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟೆನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿಯಲ್ಲಿದ್ದು, ಜೈಲಿನಿಂದಲೇ ಎರಡು ಸರ್ಕಾರಿ ಆದೇಶಗಳನ್ನು ಹೊರಡಿಸಿದ್ದಾರೆ.

ಕೇಜ್ರಿವಾಲ್ ಜೈಲಿನಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲ: ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ
ಅರವಿಂದ್ ಕೇಜ್ರಿವಾಲ್Image Credit source: The daily Guardian
ನಯನಾ ರಾಜೀವ್
|

Updated on: Mar 28, 2024 | 9:29 AM

Share

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್(Arvind Kejriwal) ಜೈಲಿನಿಂದ ಸರ್ಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್  ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿಯಲ್ಲಿದ್ದು, ಜೈಲಿನಿಂದಲೇ ಎರಡು ಸರ್ಕಾರಿ ಆದೇಶಗಳನ್ನು ಹೊರಡಿಸಿದ್ದಾರೆ.

ಬಂಧನಕ್ಕೊಳಗಾಗಿದ್ದರೂ ಯಾವುದೇ ಕಾರಣ್ಕಕೂ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ ಎಂದು ಆಮ್​ ಆದ್ಮಿ ಪಕ್ಷದ ನಾಯಕರು ಹೇಳುತ್ತಿದ್ದಾರೆ.

ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತು ಮತ್ತು ನಂತರ ಇಲ್ಲಿನ ನ್ಯಾಯಾಲಯವು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ; ಏಪ್ರಿಲ್ 3ರಂದು ಮುಂದಿನ ವಿಚಾರಣೆ

ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಹೈಕೋರ್ಟ್  ಬುಧವಾರ ಮಧ್ಯಂತರ ರಿಲೀಫ್  ನೀಡಲು ನಿರಾಕರಿಸಿದೆ. ಕೇಜ್ರಿವಾಲ್ ಅವರ ಮನವಿಗೆ ಸಂಬಂಧಿಸಿದಂತೆ ನೋಟಿಸ್‌ಗಳನ್ನು ಮಾತ್ರ ಹೊರಡಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 3 ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರಿವಾಲ್ ಅವರ ಮನವಿಯ ಮೇಲೆ ಇಡಿಗೆ ನೋಟಿಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2 ರೊಳಗೆ ಉತ್ತರಿಸಲು ಸಂಸ್ಥೆಗೆ ಸೂಚಿಸಿತು.

ಕೇಜ್ರಿವಾಲ್ ಪರ ಹಾಜರಿದ್ದ ಹಿರಿಯ ವಕೀಲ ಎಎಂ ಸಿಂಘ್ವಿ ಅವರ ವಾದವನ್ನು ತಿರಸ್ಕರಿಸಿದ ಹೈಕೋರ್ಟ್, ಇಡಿಯಿಂದ ಯಾವುದೇ ಉತ್ತರ ಅಗತ್ಯವಿಲ್ಲ ಎಂದು ವಾದಿಸಿತು. ನೆಲದ ನ್ಯಾಯದ ತತ್ವಗಳನ್ನು ಗಮನದಲ್ಲಿಟ್ಟುಕೊಂಡು ಎರಡೂ ಕಡೆಯವರನ್ನು ನ್ಯಾಯಯುತವಾಗಿ ಆಲಿಸುವುದು ಕರ್ತವ್ಯವಾಗಿದೆ. ಆದ್ದರಿಂದ ಪ್ರಸ್ತುತ ಪ್ರಕರಣವನ್ನು ನಿರ್ಧರಿಸಲು ಇಡಿಯ ಉತ್ತರವು ಅತ್ಯಗತ್ಯ ಮತ್ತು ನಿರ್ಣಾಯಕವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ