AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: ಏರ್​ಪೋರ್ಟ್​ನಲ್ಲಿ ತಪಾಸಣೆ ವೇಳೆ ವ್ಯಕ್ತಿಯ ಬಳಿ ಸಜೀವ ಗುಂಡುಗಳು ಪತ್ತೆ, ಬಂಧನ

ಲಕ್ನೋನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್​ನಲ್ಲಿ ಸಜೀವ ಗುಂಡುಗಳು ಪತ್ತೆಯಾಗಿವೆ. ನೌಶಾದ್ ಅಲಿ ಎಂಬುವವರು ಓಮನ್​ ಏರ್​ಫ್ಲೈಟ್​ ಡಬ್ಲ್ಯೂವೈ-0266 ಮೂಲಕ ಮಸ್ಕತ್​ಗೆ ಹೋಗಲು ಲಕ್ನೋ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ಲಕ್ನೋ: ಏರ್​ಪೋರ್ಟ್​ನಲ್ಲಿ ತಪಾಸಣೆ ವೇಳೆ ವ್ಯಕ್ತಿಯ ಬಳಿ ಸಜೀವ ಗುಂಡುಗಳು ಪತ್ತೆ, ಬಂಧನ
ಏರ್​ಪೋರ್ಟ್​
ನಯನಾ ರಾಜೀವ್
|

Updated on: Feb 09, 2024 | 2:56 PM

Share

ವಿಮಾನ ನಿಲ್ದಾಣ(Airport)ಕ್ಕೆ ಹೋಗುವ ಮುನ್ನ ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮೊಂದಿಗೆ ತೆಗೆದುಕೊಂಡು ಹೋಗುವ ಸಾಮಾನುಗಳನ್ನು ನೀವು ಸಂಪೂರ್ಣವಾಗಿ ಪರಿಶೀಲಿಸಬೇಕು. ಮನೆಯಿಂದ ಹೊರಡುವ ಮೊದಲು ನಿಮ್ಮ ಚೀಲದಲ್ಲಿ ನಿಮಗೆ ಸಮಸ್ಯೆಯನ್ನು ಉಂಟು ಮಾಡಬಲ್ಲ ಯಾವುದೇ ವಸ್ತು ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ. ಒಂದೊಮ್ಮೆ ಅಂತಹ ಯಾವುದೇ ವಸ್ತುಗಳು ಬ್ಯಾಗ್​ನಲ್ಲಿದ್ದರೆ ಅದು ನಿಮ್ಮನ್ನು ಜೈಲು ಕಂಬಿಗಳನ್ನು ಎಣಿಸುವಂತೆ ಮಾಡಬಹುದು ಎಚ್ಚರ.

ಇತ್ತೀಚೆಗಷ್ಟೇ ಲಕ್ನೋ ವಿಮಾನದಲ್ಲಿ ಅಂಥದ್ದೇ ಘಟನೆಯೊಂದು ನಡೆದಿದೆ, ಭದ್ರತಾ ತಪಾಸಣೆ ವೇಳೆ ವ್ಯಕ್ತಿಯ ಬ್ಯಾಗ್​ನಲ್ಲಿ ಸಜೀವ ಗುಂಡುಗಳು ಪತ್ತೆಯಾಗಿವೆ. ಇದು ಲಕ್ನೋದ ಚೌಧರಿ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನೌಶಾದ್ ಅಲಿ ಎಂಬುವವರು ಓಮನ್​ ಏರ್​ಫ್ಲೈಟ್​ ಡಬ್ಲ್ಯೂವೈ-0266 ಮೂಲಕ ಮಸ್ಕತ್​ಗೆ ಹೋಗಲು ಲಕ್ನೋ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ವಿಮಾನ ನಿಲ್ದಾಣದ ಪ್ರಕಾರ ಬ್ಯಾಗೇಜ್​ ಚೆನ್​-ಇನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ, ಭದ್ರತಾ ತಪಾಸಣೆಗೆ ಮುಂದಾದರು. ಭದ್ರತಾ ಸ್ಕ್ರೀನಿಂದ ಸಮಯದಲ್ಲಿ ಸಿಐಎಸ್​ಎಫ್ ಸ್ಕ್ರೀನರ್​ ನೌಶಾದ್ ಅವರ ಹ್ಯಾಂಡ್ ಬ್ಯಾಗ್​ ಅನ್ನು ಪರಿಶೀಲಿಸಲಾಯಿತು. ಇದರಿಂದ ಸಿಐಎಸ್​ಎಫ್ 8 ಎಂಎಂ ಕ್ಯಾಲಿಬರ್​ನ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ

ವಿಚಾರಣೆ ಸಮಯದಲ್ಲಿ ನೌಶಾದ್ ತೃಪ್ತಿದಾಯಕ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ. ಅಥವಾ ಅದಕ್ಕೆ ಬೇಕಾದ ದಾಖಲೆಗಳನ್ನು ಪ್ರಸ್ತುತಪಡಿಸಲು ಸಾಧ್ಯವಾಗಿಲ್ಲ. ಸಿಐಎಸ್‌ಎಫ್ ಆರೋಪಿ ನೌಶಾದ್ ಅಲಿಯನ್ನು ಬ್ಯಾಗ್‌ನಲ್ಲಿ ಪತ್ತೆಯಾದ ಕಾಟ್ರಿಡ್ಜ್‌ಗಳೊಂದಿಗೆ ಸರೋಜಿನಿ ನಗರ ಠಾಣೆಗೆ ಹಸ್ತಾಂತರಿಸಿದೆ. ಅಲ್ಲದೆ, ವಿಮಾನಯಾನ ಸಂಸ್ಥೆಗಳು ನೌಶಾದ್ ಚೆಕ್-ಇನ್ ಮಾಡಿದ ಬ್ಯಾಗೇಜ್ ಅನ್ನು ಡಿಬೋರ್ಡ್ ಮಾಡಿ ಅವರಿಗೆ ಹಸ್ತಾಂತರಿಸಿದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್