AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಐಎಎಸ್​ ಅಧಿಕಾರಿ ಪತ್ನಿ ಶವವಾಗಿ ಪತ್ತೆ, ಮನೆಯಲ್ಲಿದ್ದ ಚಿನ್ನಾಭರಣ ಲೂಟಿ

ನಿವೃತ್ತ ಐಎಎಸ್ ಅಧಿಕಾರಿ ಪತ್ನಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಆಭರಣಗಳು ಲೂಟಿಯಾಗಿವೆ.

ನಿವೃತ್ತ ಐಎಎಸ್​ ಅಧಿಕಾರಿ ಪತ್ನಿ ಶವವಾಗಿ ಪತ್ತೆ, ಮನೆಯಲ್ಲಿದ್ದ ಚಿನ್ನಾಭರಣ ಲೂಟಿ
ನಯನಾ ರಾಜೀವ್
|

Updated on: May 26, 2024 | 10:40 AM

Share

ನಿವೃತ್ತ ಐಎಎಸ್​ ಅಧಿಕಾರಿ ದೇವೇಂದ್ರ ನಾಥ್ ದುಬೆ ಅವರ ಪತ್ನಿ ಮೋಹಿನಿ ದುಬೆ ಶನಿವಾರ ಲಕ್ನೋದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವೇಂದ್ರನಾಥ್ ಅವರು ಗಾಲ್ಫ್ ಆಡಲು ಹೋಗಿದ್ದರು ಆದರೆ ಅವರು ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಮನೆಯ ಒಳಗಿನಿಂದ ಬೀಗ ಹಾಕಿರುವುದನ್ನು ಗಮನಿಸಿದರು.

ಬಳಿಕ ಒಳಗೆ ಹೋಗಿ ನೋಡಿದಾಗ ಪತ್ನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದುಬೆ ಅವರ ಮನೆಯ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಗಮನಿಸಿದ್ದಾರೆ. ಆಭರಣಗಳ ಜತೆಗೆ ಇತರೆ ಬೆಲೆಬಾಳುವ ವಸ್ತುಗಳು ಕೂಡ ಕಾಣೆಯಾಗಿದ್ದವು.

ಲಕ್ನೋದ ಇಂದಿರಾ ನಗರ ಪ್ರದೇಶದ ಸೆಕ್ಟರ್ 22 ರ ಪಾಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಡಿಎನ್ ದುಬೆ ಅವರು ಬೆಳಗ್ಗೆ 9.45 ರ ಸುಮಾರಿಗೆ ಗಾಲ್ಫ್ ಆಡಿ ಹಿಂತಿರುಗಿದಾಗ, ಅವರು ತಮ್ಮ ಪತ್ನಿ ಮೃತಪಟ್ಟಿರುವುದನ್ನು ಕಂಡಿದ್ದಾರೆ.

ಮತ್ತಷ್ಟು ಓದಿ:ಯುವ ಕವಿ ಲಕ್ಕೂರು ಆನಂದ ಅನುಮಾನಾಸ್ಪದ ಸಾವು, ರಸ್ತೆ ಬದಿಯಲ್ಲಿ ಶವ ಪತ್ತೆ

ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ, ಮ್ಮ ಕ್ರೈಂ ಬ್ರಾಂಚ್‌ನ ನಾಲ್ಕು ತಂಡಗಳು, ಶ್ವಾನ ದಳವನ್ನು ಹೊರತುಪಡಿಸಿ, ಮತ್ತು ವಿಧಿವಿಜ್ಞಾನ ತಂಡವು ಅಪರಾಧ ಸ್ಥಳಕ್ಕೆ ತಲುಪಿದೆ.

ವಿಚಾರಣೆಗಳು ಸಹ ನಡೆಯುತ್ತಿವೆ. ನಾವು ಪ್ರಾಥಮಿಕವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ಕಾರಣವನ್ನು ಖಚಿತಪಡಿಸಲು ಸಾಧ್ಯವಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದುಷ್ಕರ್ಮಿಗಳು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಲು ಪೊಲೀಸರು ಮುಂದಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?