ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ

ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕನ ತಾಯಿ ಆರೋಪಿ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿರ್ಭಯ್ ವಿಹಾರ್ ನಿವಾಸಿಯೊಬ್ಬರು ನೀಡಿದ ದೂರಿನ ಪ್ರಕಾರ, ಅವರ ಮಗ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ.

ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ
ವಿದ್ಯಾರ್ಥಿ
Image Credit source: News 18

Updated on: Feb 02, 2026 | 7:15 AM

ಲಕ್ನೋ, ಫೆಬ್ರವರಿ 02: ಐದನೇ ತರಗತಿ ವಿದ್ಯಾರ್ಥಿ(Student)ಯೊಬ್ಬನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿರುವ ಪರಿಣಾಮ ಆತ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಲಕ್ನೋದ ಶಾಲೆಯೊಂದರಲ್ಲಿ ನಡೆದಿದೆ. ಲಕ್ನೋದ ಆರ್ಮಿ ಪಬ್ಲಿಕ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಆವರಣದಲ್ಲಿ ಇಬ್ಬರು ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯಗಳಾಗಿವೆ.

ಜನವರಿ 21ರಂದು ಮಧ್ಯಾಹ್ನ 12.30ರ ಸುಮಾರಿಗೆ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ತನ್ನ ಮಗನ ಮೇಲೆ ಬೇರೆ ವಿಭಾಗದ ಐದನೇ ಹಾಗೂ ಮೂರನೇ ತರಗತಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಮಕ್ಕಳು ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ , ಶೂನ ಹಿಮ್ಮಡಿಯಿಂದ ಕಣ್ಣು ಮತ್ತು ಮುಖದ ಮೇಲೆ ಉಜ್ಜಿದ್ದಾರೆ. ಇದರಿಂದ ಬಾಲಕನಿಗೆ ತೀವ್ರ ಹಾನಿಯುಂಟಾಗಿದೆ. ನಂತರ ಆತ ದೃಷ್ಟಿ ಕಳೆದುಕೊಂಡಿದ್ದಾನೆ.

ಈಗ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಶಾಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಅವರು ಅದನ್ನು ಗಮನಿಸಿಲ್ಲ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳು ಮತ್ತ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ದೂರು ಸ್ವೀಕರಿಸಲಾಗಿದ್ದು, ಜನವರಿ 30 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್

ಬಾಲಕನ ತಾಯಿ ಆರೋಪಿ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿರ್ಭಯ್ ವಿಹಾರ್ ನಿವಾಸಿಯೊಬ್ಬರು ನೀಡಿದ ದೂರಿನ ಪ್ರಕಾರ, ಅವರ ಮಗ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆಯ ಆಟದ ಮೈದಾನದಲ್ಲಿ ಬೇರೆ ವಿಭಾಗದ ವಿದ್ಯಾರ್ಥಿಗಳು ತನ್ನ ಮಗನ ಮೇಲೆ ಹಲ್ಲೆ ನಡೆಸಿ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರಂಭದಲ್ಲಿ ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ತಾಯಿ ಆರೋಪಿಸಿದ್ದಾರೆ. ನಂತರ ಅವರು ಕಂಟೋನ್ಮೆಂಟ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ, ಘಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು ಮತ್ತು ಕೆಲವು ಶಾಲಾ ಸಿಬ್ಬಂದಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಔಪಚಾರಿಕ ದೂರು ದಾಖಲಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:13 am, Mon, 2 February 26