Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು.

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ
ಲುಧಿಯಾನಾ ಕೋರ್ಟ್​ನಲ್ಲಿ ಸ್ಫೋಟ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 25, 2021 | 2:42 PM

ಲುಧಿಯಾನ: ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್​ನಲ್ಲಿ ಗುರುವಾರ ನಡೆದ ಸ್ಫೋಟದ ತನಿಖೆಯ ಸಂದರ್ಭದಲ್ಲಿ ಈ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಕೈವಾಡವಿರುವುದು ಪತ್ತೆಯಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಹೇಳಿದ್ದಾರೆ. ಈಗಾಗಲೇ ಮಾಜಿ ಪೊಲೀಸ್ ಕಾನ್ಸ್​ಟೆಬಲ್​ನನ್ನು ಈ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಲುಧಿಯಾನ ಸ್ಫೋಟದ ಹಿಂದೆ ಖಲಿಸ್ತಾನಿ, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ಲಿಂಕ್ ಇದೆ ಎಂದು ತಿಳಿದುಬಂದಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾವು ಭಯೋತ್ಪಾದನೆ ಮತ್ತು ಮಾದಕ ದ್ರವ್ಯಗಳಿಂದ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಲುಧಿಯಾನ ಸ್ಫೋಟ ಪ್ರಕರಣ ಕೂಡ ಈ ಪಟ್ಟಿಗೆ ಸೇರಿದೆ ಎಂದು ಅವರು ಹೇಳಿದ್ದಾರೆ. ನಾವು 24 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದೇವೆ. ನಮಗೆ ಘಟನೆ ನಡೆದ ಸ್ಥಳದಲ್ಲಿ ಹಲವಾರು ಸುಳಿವುಗಳು ಸಿಕ್ಕಿವೆ. ಹರಿದ ಬಟ್ಟೆಗಳು ಮತ್ತು ಸಿಮ್ ಕಾರ್ಡ್, ಮೊಬೈಲ್ ಮತ್ತು ಆರೋಪಿಯ ತೋಳಿನ ಮೇಲೆ ಹಚ್ಚೆ ಇರುವುದು ನಮಗೆ ಗೊತ್ತಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಡಿಸೆಂಬರ್ 23ರಂದು ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿಯ ಜೀವವನ್ನು ಬಲಿ ತೆಗೆದುಕೊಂಡಿತ್ತು. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿತ್ತು.

ಲುಧಿಯಾನ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿಯೇ ಆತ್ಮಾಹುತಿ ಬಾಂಬರ್‌ ಎನ್ನಲಾಗಿದ್ದು, ಆತ ಮಾಜಿ ಪೊಲೀಸ್ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಆಗಿದ್ದ ಆತನನ್ನು 2019ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಸಲ್ಪಟ್ಟಿದ ಆತ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ. ಸೆಪ್ಟೆಂಬರ್​ನಲ್ಲಿ ಬಿಡುಗಡೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಗಗನ್​ದೀಪ್ ಸಿಂಗ್​ನ ಸಿಮ್ ಕಾರ್ಡ್ ಮತ್ತು ವೈರ್‌ಲೆಸ್ ಡಾಂಗಲ್ ಮೂಲಕ ಆತನ ಗುರುತು ಪತ್ತೆಹಚ್ಚಲು ಸಾಧ್ಯವಾಯಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಬ್​ ಇದೆ ಎಂದು ಹೇಳಿದ ಬಿಜೆಪಿ ನಾಯಕಿ ಉಮಾ ಭಾರತಿ; ಉತ್ತರಪ್ರದೇಶದ ಬಳಿ 2 ತಾಸು ನಿಲುಗಡೆಯಾದ ರೈಲು

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ