ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆ
ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್‌ಎಚ್‌ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

ಲುಧಿಯಾನಾ, ಜೂನ್ 27: ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಎಸ್‌ಎಚ್‌ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ, ಆದರೆ ದೇಹ ಸಂಪೂರ್ಣವಾಗಿ ಕೊಳೆತುಹೋಗಿದೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿನ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಅವರು ಹೇಳಿದರು.
ತನಿಖಾ ಅಧಿಕಾರಿಗಳು ಲುಧಿಯಾನದಲ್ಲಿರುವ 42 ಡ್ರಮ್ ತಯಾರಿಕಾ ಘಟಕಗಳ ಪಟ್ಟಿಯನ್ನು ಸಂಗ್ರಹಿಸಿದ್ದಾರೆ. ಮೃತದೇಹ ಪತ್ತೆಯಾಗಿರುವ ಡ್ರಮ್ ಹೊಸದಾಗಿದ್ದು, ಇದು ಪೂರ್ವಯೋಜಿತ ಕೊಲೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಕೊಲೆಗೆ ಮುನ್ನ ಡ್ರಮ್ ಅನ್ನು ಹೊಸದಾಗಿ ಖರೀದಿಸಲಾಗಿದೆ ಎಂಬ ಅನುಮಾನವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತಷ್ಟು ಓದಿ: ಲಕ್ನೋದ ಹೋಟೆಲ್ ರೂಂನಲ್ಲಿ ಉಜ್ಬೇಕಿಸ್ತಾನದ ಮಹಿಳೆಯ ಶವ ಪತ್ತೆ
ಅಪರಾಧ ಸ್ಥಳದ 5 ಕಿಲೋಮೀಟರ್ ವ್ಯಾಪ್ತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸ್ಕ್ಯಾನ್ ಮಾಡಲು ಪ್ರಾರಂಭಿಸಿದ್ದಾರೆ. ನಗರದ ಕ್ಯಾಮೆರಾಗಳು, ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಪೊಲೀಸರು ಮಾರ್ಗವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ ಮತ್ತು ಹಲವಾರು ಅನುಮಾನಾಸ್ಪದ ವಾಹನ ನೋಂದಣಿ ಸಂಖ್ಯೆಗಳನ್ನು ಪರಿಶೀಲಿಸುತ್ತಿದ್ದಾರೆ.
ಹಲವು ಡ್ರಮ್ ಕಂಪನಿಗಳನ್ನು ಪ್ರಶ್ನಿಸಲಾಗುತ್ತಿದೆ. ಅಪರಾಧ ನಡೆದ ಸ್ಥಳದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯ ವಲಸಿಗರು ವಾಸಿಸುತ್ತಿದ್ದಾರೆ, ಮತ್ತು ನಾವು ಅವರನ್ನೂ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್‌ಎಚ್‌ಒ ಕುಲ್ವಂತ್ ಕೌರ್ ಹೇಳಿದರು.
ಅಂಥದ್ದೇ ಘಟನೆ
ಆನೇಕಲ್: ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್‌ಕೇಸ್‌ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬುಧವಾರ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ (Woman Body) ಪತ್ತೆಯಾಗಿದೆ. ಪೊಲೀಸರ ಪ್ರಕಾರ, ವಿಜಯದುರ್ಗಾ ಮಾಲೀಕರ ಸಂಘದ ಕಾಲೋನಿಯ ರೆಡ್ಡಿ ಲ್ಯಾಬ್‌ನ ಗೋಡೆಯ ಬಳಿ 25ರಿಂದ 35 ವರ್ಷ ವಯಸ್ಸಿನ ಮಹಿಳೆಯ ಹೆಣ ಪತ್ತೆಯಾಗಿದೆ. ಈ ಜಾಗದಲ್ಲಿ ಕಡುಗೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ದುರ್ವಾಸನೆ ಬರುತ್ತಿದೆ ಎಂಬುದರ ಬಗ್ಗೆ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೂಟ್‌ಕೇಸ್ ಅನ್ನು ಪರಿಶೀಲಿಸಿದಾಗ, ಕೆಂಪು ಸೂಟ್ ಧರಿಸಿದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ 10ರಿಂದ 12 ದಿನಗಳ ಹಿಂದೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಯಾರೋ ಆಕೆಯನ್ನು ಬೇರೆಡೆ ಕೊಂದು ಇಲ್ಲಿ ಎಸೆದಿರುವಂತೆ ತೋರುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 194ರ ಅಡಿಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂಟ್‌ಕೇಸ್ ಅನ್ನು ಯಾರಾದರೂ ಎಸೆದಿರುವ ದೃಶ್ಯಗಳಿಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








