AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು
ಸಂಗ್ರಹ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 18, 2022 | 8:57 AM

ಮುಂಬೈ: ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ (Lumpy Virus) 126 ಜಾನುವಾರುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದ (Maharashtra) ಒಟ್ಟು 25 ಜಿಲ್ಲೆಗಳಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ. ಲಂಪಿ ಸ್ಕಿನ್ ಡಿಸೀಸ್ (LSD) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ವಾಶಿಮ್‌ನಲ್ಲಿ 1, ಜಲ್ನಾದಲ್ಲಿ 1 ಮತ್ತು ನಾಗ್ಪುರ ಜಿಲ್ಲೆಯಲ್ಲಿ 1 ಸೇರಿದಂತೆ ಒಟ್ಟು 126 ಸೋಂಕಿತ ಜಾನುವಾರುಗಳು ಸಾವನ್ನಪ್ಪಿವೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Langya Virus: ಕೊರೊನಾದಂತೆಯೇ ಚೀನಾದಲ್ಲಿ ‘ಲಾಂಗ್ಯ’ ಎನ್ನುವ ಹೊಸ ವೈರಸ್ ಪತ್ತೆ: 35 ಮಂದಿಗೆ ಸೋಂಕು

ಪಶುಸಂಗೋಪನಾ ಇಲಾಖೆ ಪ್ರಕಾರ, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಡಿಪಿಸಿ ಮೂಲಕ ಜಿಲ್ಲೆಗೆ 1 ಕೋಟಿ ನಿಧಿ ಲಭ್ಯವಾಗಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ 3 ರೂ. ಗೌರವಧನವನ್ನು ನೀಡಲು ಸಹ ಅನುಮತಿಸಲಾಗಿದೆ.

ನೊಣಗಳು, ಸೊಳ್ಳೆಗಳಿಂದ ಈ ಲಂಪಿ ವೈರಸ್ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ ಪಂಚಾಯತ್‌ಗಳಿಗೆ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ