AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಚಿಪ್ಸ್​ ಕದ್ದಿಲ್ಲಮ್ಮಾ, ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆ

ನಾನು ಚಿಪ್ಸ್​ ಕದ್ದಿಲ್ಲಮ್ಮಾ ಎಂದು ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳ(West Bengal)ದಲ್ಲಿ ನಡೆದಿದೆ. ಚಿಪ್ಸ್​ ಪ್ಯಾಕೇಟ್​ ಕದ್ದ ಆರೋಪದ ಮೇಲೆ ನಾಲ್ಕು ಜನರ ಎದುರು ಅಂಗಡಿಯವ ಬೈದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಅವಮಾನಕ್ಕೊಳಗಾದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬರೆದ ಡೆತ್ ನೋಟ್​ನಲ್ಲಿ ಅಮ್ಮಾ ನಾನು ಚಿಪ್ಸ್​ ಕದ್ದಿಲ್ಲ ಎಂದು ಹೇಳಿದ್ದಾನೆ. ಗುರುವಾರ ಸಂಜೆ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನು ಚಿಪ್ಸ್​ ಕದ್ದಿಲ್ಲಮ್ಮಾ, ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆ
ಚಿಪ್ಸ್​
ನಯನಾ ರಾಜೀವ್
|

Updated on:May 23, 2025 | 3:09 PM

Share

ಕೋಲ್ಕತ್ತಾ, ಮೇ 23: ನಾನು ಚಿಪ್ಸ್​ ಕದ್ದಿಲ್ಲಮ್ಮಾ ಎಂದು ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳ(West Bengal)ದಲ್ಲಿ ನಡೆದಿದೆ. ಚಿಪ್ಸ್​ ಪ್ಯಾಕೇಟ್​ ಕದ್ದ ಆರೋಪದ ಮೇಲೆ ನಾಲ್ಕು ಜನರ ಎದುರು ಅಂಗಡಿಯವ ಬೈದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಅವಮಾನಕ್ಕೊಳಗಾದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬರೆದ ಡೆತ್ ನೋಟ್​ನಲ್ಲಿ ಅಮ್ಮಾ ನಾನು ಚಿಪ್ಸ್​ ಕದ್ದಿಲ್ಲ ಎಂದು ಹೇಳಿದ್ದಾನೆ. ಗುರುವಾರ ಸಂಜೆ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

7 ನೇ ತರಗತಿಯ ವಿದ್ಯಾರ್ಥಿ ಕೃಷ್ಣೇಂದು ದಾಸ್ ಎಂದು ಗುರುತಿಸಲಾದ ಬಾಲಕ ಚಿಪ್ಸ್ ಖರೀದಿಸಲು ಅಂಗಡಿಯೊಂದಕ್ಕೆ ಹೋಗಿದ್ದ ಎಂದು ವರದಿಯಾಗಿದೆ. ಆತನ ಕುಟುಂಬದ ಪ್ರಕಾರ, ಶುಭಂಕರ್ ದೀಕ್ಷಿತ್ ಎಂದು ಗುರುತಿಸಲಾದ ಅಂಗಡಿಯವನಿಗೆ ಪದೇ ಪದೇ ಕರೆದರೂ ಆತ ಉತ್ತರಿಸಿರಲಿಲ್ಲ, ಅಂಕಲ್ ನಾನು ಚಿಪ್ಸ್​ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರೂ ಆ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ, ಅಂಗಡಿಯವರು ಇಲ್ಲ ಆಮೇಲೆ ಹಣ ಕೊಟ್ಟರಾಯ್ತು ಎಂದು ಹೇಳಿ ಪ್ಯಾಕೆಟ್​ ತೆಗೆದುಕೊಂಡಿದ್ದಾನೆ.

ಕೆಲವು ಕ್ಷಣಗಳ ಬಳಿಕ, ಅಂಗಡಿಯವನು ಹಿಂತಿರುಗಿ ಬಂದು, ಕೃಷ್ಣೇಂದು ಹಿಂದೆಯೇ ಬಂದು , ಕಪಾಳಮೋಕ್ಷ ಮಾಡಿ, ಬ್ಸಕಿ ಹೊಡೆಸಿದ್ದಾರೆ ಎಂದು ಕುಟುಂಬ ದೂರಿನಲ್ಲಿ ತಿಳಿಸಿದ್ದಾರೆ. ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ ಗದರಿಸಲಾಯಿತು. ಕೃಷ್ಣೇಂದು ಚಿಪ್ಸ್​ಗೆ ಹಣ ಕೊಡಬೇಕೆಂದಿದ್ದೆ ಎಂದು ವಿವರಿಸಲು ಪ್ರಯತ್ನಿಸಿದ್ದಾಗಿ ವರದಿಯಾಗಿದೆ, ಆದರೆ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ.

ಇದನ್ನೂ ಓದಿ
Image
ಪ್ರೀತಿ-ಪ್ರೇಮವೆಂದು ಸುತ್ತಾಡಿ ಕೈಕೊಟ್ಟ ಪ್ರೇಯಸಿ:ಪ್ರಾಣಕಳೆದುಕೊಂಡ ಪ್ರಿಯಕರ
Image
ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದ ಅಫಾನ್
Image
ಪ್ರಿಯಕರ ಬೇರೊಬ್ಬಳ ಜತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ
Image
ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುರಂತ ಸಾವು!

ಮತ್ತಷ್ಟು ಓದಿ: ಸೋದರಳಿಯನ ಮೇಲೆ ಪ್ರೀತಿ, ಪತಿಯನ್ನೇ ಕೊಂದು ಪಕ್ಕದ ಮನೆಯವನ ಮೇಲೆ ಆರೋಪ ಹಾಕಿದ್ದ ಮಹಿಳೆ ಅರೆಸ್ಟ್

ದೀಕ್ಷಿತ್ ಅವರ ಒಪ್ಪಿಗೆಯಿಲ್ಲದೆ ಪ್ಯಾಕೆಟ್ ತೆಗೆದುಕೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ ತಕ್ಷಣವೇ ಹಣ ಕೊಡಲು ಮುಂದಾದರು, ಆದರೆ ಅಂಗಡಿ ಮಾಲೀಕ ಅವನು ಸುಳ್ಳು ಹೇಳುತ್ತಿದ್ದಾನೆಂದು ಆರೋಪಿಸಿದ್ದಾನೆ. ಮನೆಗೆ ಹಿಂತಿರುಗಿದಾಗ, ಹುಡುಗ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ, ನಂತರ ಅವನು ಬಾಗಿಲು ತೆರೆಯಲೇ ಇಲ್ಲ, ಆತ ಪ್ರಜ್ಞಾಹೀನನಾಗಿ ಬಿದ್ದಿದ್ದ.

ಅರ್ಧ ಖಾಲಿಯಾದ ಕೀಟನಾಶಕ ಬಾಟಲಿಯು ಅವನ ಪಕ್ಕದಲ್ಲಿ ಬಿದ್ದಿದ್ದು, ಬಾಯಿಯಿಂದ ನೊರೆ ಬರುತ್ತಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟರೊಳಗಾಗಿ ಪ್ರಾಣಪಕ್ಷಿ ಹಾರಿಹೋಗಿತ್ತು. ಹೀಗಾಗಿ ಯಾರ ಮೇಲಾದರೂ ಆರೋಪ ಹೊರಿಸುವ ಮುನ್ನ ನೂರು ಬಾರಿ ಯೋಚನೆ ಮಾಡಬೇಕು. ಹಾಗೆಯೇ ಆರೋಪಿಗೆ ಮಾತನಾಡಲು ಅವಕಾಶ ನೀಡಬೇಕು. ದುಡ್ಡು ಹೇಗಾದರೂ ಗಳಿಸಬಹುದು ಆದರೆ ಹೋದ ಪ್ರಾಣ ಹಿಂದಿರುಗಿ ಬಾರದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:09 pm, Fri, 23 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ