ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ಪಲ್ನಾಡು ಜಿಲ್ಲೆಯ ಮಾಚೆರ್ಲಾದಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ 35 ವರ್ಷದ ಸರ್ಕಾರಿ ಉದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಲಾಗಿದೆ. ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಆರೋಪಿ ಈ ಕೃತ್ಯ ಎಸಗಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಮಹಿಳಾ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

ವಿಕೃತ ಕಾಮಿಯ ಅಟ್ಟಹಾಸ: ನನಗೆ ಎಚ್‌ಐವಿ ಇದೆ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!
ಸಾಂದರ್ಭಿಕ ಚಿತ್ರ

Updated on: Apr 04, 2026 | 10:57 AM

ವಿಜಯವಾಡ, ಏ.4: ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಒಂದು ಅಮಾನೀಯ ಘಟನೆಯೊಂದು ನಡೆದಿದೆ. 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿ, ಚಿತ್ರ ಹಿಂಸೆ ನೀಡಿದ್ದಾರೆ. ಗುರುವಾರ ಸಂಜೆ ಸಂತ್ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಚೆರ್ಲಾ ಪಟ್ಟಣದಲ್ಲಿ ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆರೋಪಿಗಳು ಬಂದು ಈ ಅಪರಾಧ ಎಸಗಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ಮಧ್ಯಾಹ್ನ 3:30 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಆರೋಪಿ ಕುಡಿಯಲು ನೀರು ಕೇಳುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ, ಮಹಿಳೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ ಎಂದು ಮಾಚೆರ್ಲಾ ಪಟ್ಟಣದ ಸಿಐ ವೆಂಕಟ ರಮಣ ಎಂಬುವವರು ತಿಳಿಸಿದ್ದಾರೆ. ಸಂತ್ರಸ್ತೆ ಪ್ರಸ್ತುತ ನರಸರಾವ್‌ಪೇಟ ಏರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಮಹಿಳೆಯ ಮನೆ ಒಳಗೆ ನುಗ್ಗಿದ ನಂತರ, ಆರೋಪಿಯು ಆಕೆಯನ್ನು ಸ್ಕಾರ್ಫ್‌ನಿಂದ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಮಾಡಿ, ಥಳಿಸಿದ್ದಾನೆ. ಈ ವೇಳೆ ಮಹಿಳೆ ತನಗೆ ಎಚ್‌ಐವಿ ಸೋಂಕು ಇದೆ ಎಂದು ಹೇಳಿಕೊಂಡ, ಕೋಪದಿಂದ ಕಬ್ಬಿಣದ ರಾಡ್​​ ಅನ್ನು ಆಕೆಯ ಖಾಸಗಿ ಭಾಗಕ್ಕೆ ತುರುಕಿದ್ದಾನೆ. ನಂತರ ಅಲ್ಲಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 6 ಮಕ್ಕಳು ಸೇರಿ 9 ಮಂದಿ ದಾರುಣ ಸಾವು!

ಸಂತ್ರಸ್ತೆಯ ಜೊತೆ ವಾಸವಾಗಿದ್ದ ಆಕೆಯ ಸೋದರಳಿಯ ಹತ್ತನೇ ತರಗತಿ ಪರೀಕ್ಷೆ ಮುಗಿಸಿ ತನ್ನ ಹೆತ್ತವರ ಮನೆಗೆ ತೆರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕ ಸಂತ್ರಸ್ತೆಯ ಮೊಬೈಲ್ ಫೋನ್‌ಗೆ ಹಲವು ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಏನೋ ಸಮಸ್ಯೆಯಾಗಿದೆ ಎಂದು ತಿಳಿದು ಅವನು ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೆ ಆಕೆಯ ಮನೆಗೆ ಭೇಟಿ ನೀಡಿ ವಿಚಾರಿಸುವಂತೆ ಹೇಳಿದ್ದಾನೆ. ಬಾಲಕ ಮಾತಿನಂತೆ ಸ್ಥಳೀಯರು ಮಹಿಳೆಯ ಮನೆಗೆ ಧಾವಿಸಿ ನೋಡಿದಾಗ ಆಕೆ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ನೋಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಆಕೆಯನ್ನು ಮೊದಲು ಮಾಚೆರ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನರಸರಾವ್‌ಪೇಟ ಏರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us