ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 10 ವರ್ಷದ ಬಾಲಕಿ
ತಾಯಿಗೆ ಟ್ರಿಪ್ಗೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಪ್ರಸಿದ್ಧ ಪ್ರವಾಸಿತಾಣವಾದ ಭೇದಘಾಟ್‌ಗೆ ಕರೆದೊಯ್ಯಲು ತಾಯಿ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಭೇದಘಾಟ್‌ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಯಿ ನಿರಾಕರಿಸಿದಾಗ ಬಾಲಕಿ ಮೆಟ್ಟಿಲು ಹತ್ತಿ ಡೋರ್ ಕರ್ಟನ್ ಗೆ ನೇಣು ಬಿಗಿದುಕೊಂಡಿದ್ದಾಳೆ ಎಂದು ದನ್ವಂತ್ರಿ ನಗರ ಠಾಣೆಯ ಇನ್ಸ್ ಪೆಕ್ಟರ್ ವಿನೋದ್ ಪಾಠಕ್ ತಿಳಿಸಿದ್ದಾರೆ. ಶವ ಪರೀಕ್ಷೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಮತ್ತಷ್ಟು ಓದಿ: ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ದಿನ ಕಳೆದಂತೆ ಮಕ್ಕಳು ತುಂಬಾ ಸೂಕ್ಷ್ಮವಾಗುತ್ತಿದ್ದಾರೆ. ಪೋಷಕರು ಅಥವಾ ಶಿಕ್ಷಕರು ಮಕ್ಕಳ ಒಳ್ಳೆಯದಕ್ಕೆ ಬುದ್ಧಿವಾದ ಹೇಳಿದರೂ ತಡೆದುಕೊಳ್ಳುವ ಸ್ಥಿತಿಯಲ್ಲಿ ಮಕ್ಕಳಿರುವುದಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ