ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 10 ವರ್ಷದ ಬಾಲಕಿ

ತಾಯಿಗೆ ಟ್ರಿಪ್​ಗೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 10 ವರ್ಷದ ಬಾಲಕಿ
ಸಾಂದರ್ಭಿಕ ಚಿತ್ರ

Updated on: May 24, 2024 | 2:50 PM

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿರುವ ಪ್ರಸಿದ್ಧ ಪ್ರವಾಸಿತಾಣವಾದ ಭೇದಘಾಟ್​ಗೆ ಕರೆದೊಯ್ಯಲು ತಾಯಿ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಭೇದಘಾಟ್‌ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಯಿ ನಿರಾಕರಿಸಿದಾಗ ಬಾಲಕಿ ಮೆಟ್ಟಿಲು ಹತ್ತಿ ಡೋರ್ ಕರ್ಟನ್ ಗೆ ನೇಣು ಬಿಗಿದುಕೊಂಡಿದ್ದಾಳೆ ಎಂದು ದನ್ವಂತ್ರಿ ನಗರ ಠಾಣೆಯ ಇನ್ಸ್ ಪೆಕ್ಟರ್ ವಿನೋದ್ ಪಾಠಕ್ ತಿಳಿಸಿದ್ದಾರೆ. ಶವ ಪರೀಕ್ಷೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ದಿನ ಕಳೆದಂತೆ ಮಕ್ಕಳು ತುಂಬಾ ಸೂಕ್ಷ್ಮವಾಗುತ್ತಿದ್ದಾರೆ. ಪೋಷಕರು ಅಥವಾ ಶಿಕ್ಷಕರು ಮಕ್ಕಳ ಒಳ್ಳೆಯದಕ್ಕೆ ಬುದ್ಧಿವಾದ ಹೇಳಿದರೂ ತಡೆದುಕೊಳ್ಳುವ ಸ್ಥಿತಿಯಲ್ಲಿ ಮಕ್ಕಳಿರುವುದಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us