Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ
Image Credit source: Mid Day
Follow us
ನಯನಾ ರಾಜೀವ್
|

Updated on: Jun 29, 2023 | 3:02 PM

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ. 40 ಸಾವಿರ ರೂ. ಆಸೆಗೆ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದರು, ವರನಿಗೆ ಈಗ 27 ವರ್ಷ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೂನ್ 27 ರಂದು ಭೋಪಾಲ್ ಬಳಿಯ ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ 27 ವರ್ಷದ ಯುವಕನೊಂದಿಗೆ 12 ವರ್ಷದ ಬುಡಕಟ್ಟು ಹುಡುಗಿಯ ವಿವಾಹವನ್ನು ತಡೆದು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು 40,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡಿ 20 ಸಾವಿರ ರೂ ಮುಂಗಡವಾಗಿ ಪಡೆದಿದ್ದು , ಉಳಿದ ಮೊತ್ತವನ್ನು ಮದುವೆಯ ನಂತರ ಅವರಿಗೆ ನೀಡುವುದಾಗಿ ತಿಳಿಸಿದ್ದರಂತೆ. ಎಸ್​ಪಿ ಕಿರಣಲತಾ ಕೆರ್ಕೆಟ್ಟಾ ಮಾತನಾಡಿ, ಜೂನ್ 26 ರಂದು ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು, ನಂತರ ನಾವು ಸ್ಥಳಕ್ಕೆ ತಲುಪಿ ನೋಡಿದ್ದೇವೆ.

ಅರಿಶಿಣ ಶಾಸ್ತ್ರ ನಡೆಯುತ್ತಿತ್ತು. ವಿಚಾರಣೆ ನಡೆಸಿದಾಗ ಹುಡುಗಿಗೆ 12 ವರ್ಷ ಮತ್ತು ಆಕೆ ಮದುವೆಯಾಗಲಿರುವ ವ್ಯಕ್ತಿಗೆ 27 ವರ್ಷ ಎಂದು ತಿಳಿದುಬಂದಿದೆ. ಆಕೆಯ ಪೋಷಕರು 40,000 ರೂ ಪಡೆದು, ಮದುವೆಗೆ ಒಪ್ಪಿಗೆ ನೀಡಿದ್ದರು.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳ, ಇದನ್ನು ತಡೆಯಲು ಅಧಿಕಾರಿಗಳಿಂದ ಹೊಸ ತಂತ್ರ

ಮಾನವ ಕಳ್ಳಸಾಗಣೆ, ಬಾಲಾಪರಾಧಿ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಪೋಷಕರು, ವರ ಮತ್ತು ಅವರ ಪೋಷಕರು ಸೇರಿದಂತೆ ಐವರ ವಿರುದ್ಧ ಇದುವರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ, ದಲ್ಲಾಳಿಗಳಾಗಿ ಕೆಲಸ ಮಾಡಿದವರು ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧವೂ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್