Madhya Pradesh: 70-80 ಮಂದಿ ಪ್ರಯಾಣಿಕರಿದ್ದ ಬಸ್ ಸೇತುವೆಯಿಂದ 50 ಅಡಿ ಕೆಳಗೆ ಬಿದ್ದು 23 ಮಂದಿ ಸಾವು
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ.
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 123 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್ನಲ್ಲಿ 50 ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ.
ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Madhya Pradesh | 15 people dead and 25 injured after a bus falls from a bridge in Khargone. Rescue operation underway: Dharam Veer Singh, SP Khargone pic.twitter.com/X66l8Vt7iT
— ANI (@ANI) May 9, 2023
ಅಷ್ಟರಲ್ಲಿ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿದರು. ಮತ್ತೊಂದು ಘಟನೆಯಲ್ಲಿ ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್‌ಪೋರ್ಟ್ (ಬೆಸ್ಟ್) ಬಸ್ ಮುಂಬೈನ ಪಶ್ಚಿಮ ಉಪನಗರ ಅಂಧೇರಿಯಲ್ಲಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.
ಬಸ್ ಅಂಧೇರಿ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಂಗಡಿಗೆ ಡಿಕ್ಕಿ ಹೊಡೆದಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:28 am, Tue, 9 May 23