Madhya Pradesh: 70-80 ಮಂದಿ ಪ್ರಯಾಣಿಕರಿದ್ದ ಬಸ್​ ಸೇತುವೆಯಿಂದ 50 ಅಡಿ ಕೆಳಗೆ ಬಿದ್ದು 23 ಮಂದಿ ಸಾವು

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ.

Madhya Pradesh: 70-80 ಮಂದಿ ಪ್ರಯಾಣಿಕರಿದ್ದ ಬಸ್​ ಸೇತುವೆಯಿಂದ 50 ಅಡಿ ಕೆಳಗೆ ಬಿದ್ದು 23 ಮಂದಿ ಸಾವು
ಬಸ್
Image Credit source: News9
Edited By: ರಶ್ಮಿ ಕಲ್ಲಕಟ್ಟ

Updated on: May 09, 2023 | 4:54 PM

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 123 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ. ಇಂದೋರ್‌ಗೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್‌ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.

ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಬಸ್​ನಲ್ಲಿ 50 ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ.

ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಷ್ಟರಲ್ಲಿ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿದರು. ಮತ್ತೊಂದು ಘಟನೆಯಲ್ಲಿ ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್‌ಪೋರ್ಟ್ (ಬೆಸ್ಟ್) ಬಸ್ ಮುಂಬೈನ ಪಶ್ಚಿಮ ಉಪನಗರ ಅಂಧೇರಿಯಲ್ಲಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.

ಬಸ್ ಅಂಧೇರಿ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಅಂಗಡಿಗೆ ಡಿಕ್ಕಿ ಹೊಡೆದಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:28 am, Tue, 9 May 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us