AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahakal Lok Temple Corridor: ಬಿರುಗಾಳಿ, ಮಳೆಯಿಂದಾಗಿ ಮಹಾಕಾಲ್ ಕಾರಿಡಾರ್​ನಲ್ಲಿರುವ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿ, ಇಬ್ಬರು ಸಾವು

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ್​ ಕಾರಿಡಾರ್​ನಲ್ಲಿರುವ ಸಪ್ತಋಷಿಗಳ ಪ್ರತಿಮೆ ಹಾನಿಯಾಗಿದೆ.

Mahakal Lok Temple Corridor: ಬಿರುಗಾಳಿ, ಮಳೆಯಿಂದಾಗಿ ಮಹಾಕಾಲ್ ಕಾರಿಡಾರ್​ನಲ್ಲಿರುವ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿ, ಇಬ್ಬರು ಸಾವು
ಸಪ್ತಋಷಿ
ನಯನಾ ರಾಜೀವ್
|

Updated on: May 29, 2023 | 7:55 AM

Share

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ್​ ಕಾರಿಡಾರ್​ನಲ್ಲಿರುವ ಸಪ್ತಋಷಿಗಳ ಪ್ರತಿಮೆ ಹಾನಿಯಾಗಿದೆ. ಭಾನುವಾರ ಭಾರಿ ಗಾಳಿ, ಮಳೆಯಾಗಿದ್ದು, ಏಳು ಪ್ರತಿಮೆಗಳಲ್ಲಿ 6 ಪ್ರತಿಮೆಗಳು ಸ್ಥಳಾಂತರಗೊಂಡಿವೆ, ಎರಡು ಪ್ರತಿಮೆಗಳಿಗೆ ಹಾನಿಯುಂಟಾಗಿದೆ. ಹಾಗೆಯೇ ಇಬ್ಬರು ಬಲಿಯಾಗಿದ್ದಾರೆ. ಅಕ್ಟೋಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಉಜ್ಜಯಿನಿ ಜಿಲ್ಲಾಧಿಕಾರಿ ಮತ್ತು ವಿಭಾಗೀಯ ಆಯುಕ್ತರೊಂದಿಗೆ ಈ ಕುರಿತು ಪರಿಶೀಲಿಸುವಂತೆ ತಿಳಿಸಿದರು.

ಸುಮಾರು 50 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಹಾಕಾಲ್ ಲೋಕದಲ್ಲಿ 155 ವಿಗ್ರಹಗಳಿವೆ. ಹಾನಿಗೊಳಗಾದ ಮೂರ್ತಿಗಳನ್ನು ಗುತ್ತಿಗೆದಾರರೇ ದುರಸ್ತಿಗೊಳಿಸುತ್ತಾರೆ.

ದೇವಾಲಯದ ಕಾರಿಡಾರ್ ನಿರ್ಮಾಣ ಕಾಮಗಾರಿಯಲ್ಲಿ ಪ್ರಮುಖ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದ್ದು, ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಜೂನ್​ 2 ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನದ ಸುತ್ತಲಿನ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ಪುನರುಜ್ಜೀವನಗೊಂಡಿರುವ ಹಳೆಯ ರುದ್ರಸಾಗರ ಕೆರೆಯನ್ನು ದೇಶದಲ್ಲೇ ಅತಿ ಉದ್ದದ ಕಾರಿಡಾರ್ ಎಂದು ಹೇಳಲಾಗುತ್ತದೆ.

ನಾವು ಕ್ರೇನ್ ಸಹಾಯದಿಂದ ಸ್ಥಳಾಂತರಗೊಂಡ ಮತ್ತು ಹಾನಿಗೊಳಗಾದ ಪ್ರತಿಮೆಗಳನ್ನು ಸ್ಥಳಾಂತರಿಸಿದ್ದೇವೆ. ಅದೇ ಎಫ್‌ಆರ್‌ಪಿ ವಸ್ತುಗಳಿಂದ ಮಾಡಿದ ಇತರ ಪ್ರತಿಮೆಗಳನ್ನು ಪರಿಶೀಲಿಸಲಾಗುತ್ತದೆ, ಶೀಘ್ರವೇ ಆರು ಪ್ರತಿಮೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ