ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ್ ಕಾರಿಡಾರ್ನಲ್ಲಿರುವ ಸಪ್ತಋಷಿಗಳ ಪ್ರತಿಮೆ ಹಾನಿಯಾಗಿದೆ. ಭಾನುವಾರ ಭಾರಿ ಗಾಳಿ, ಮಳೆಯಾಗಿದ್ದು, ಏಳು ಪ್ರತಿಮೆಗಳಲ್ಲಿ 6 ಪ್ರತಿಮೆಗಳು ಸ್ಥಳಾಂತರಗೊಂಡಿವೆ, ಎರಡು ಪ್ರತಿಮೆಗಳಿಗೆ ಹಾನಿಯುಂಟಾಗಿದೆ. ಹಾಗೆಯೇ ಇಬ್ಬರು ಬಲಿಯಾಗಿದ್ದಾರೆ. ಅಕ್ಟೋಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಉಜ್ಜಯಿನಿ ಜಿಲ್ಲಾಧಿಕಾರಿ ಮತ್ತು ವಿಭಾಗೀಯ ಆಯುಕ್ತರೊಂದಿಗೆ ಈ ಕುರಿತು ಪರಿಶೀಲಿಸುವಂತೆ ತಿಳಿಸಿದರು.
ಸುಮಾರು 50 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಹಾಕಾಲ್ ಲೋಕದಲ್ಲಿ 155 ವಿಗ್ರಹಗಳಿವೆ. ಹಾನಿಗೊಳಗಾದ ಮೂರ್ತಿಗಳನ್ನು ಗುತ್ತಿಗೆದಾರರೇ ದುರಸ್ತಿಗೊಳಿಸುತ್ತಾರೆ.
ದೇವಾಲಯದ ಕಾರಿಡಾರ್ ನಿರ್ಮಾಣ ಕಾಮಗಾರಿಯಲ್ಲಿ ಪ್ರಮುಖ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದ್ದು, ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನದ ಸುತ್ತಲಿನ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ ಪುನರುಜ್ಜೀವನಗೊಂಡಿರುವ ಹಳೆಯ ರುದ್ರಸಾಗರ ಕೆರೆಯನ್ನು ದೇಶದಲ್ಲೇ ಅತಿ ಉದ್ದದ ಕಾರಿಡಾರ್ ಎಂದು ಹೇಳಲಾಗುತ್ತದೆ.
ನಾವು ಕ್ರೇನ್ ಸಹಾಯದಿಂದ ಸ್ಥಳಾಂತರಗೊಂಡ ಮತ್ತು ಹಾನಿಗೊಳಗಾದ ಪ್ರತಿಮೆಗಳನ್ನು ಸ್ಥಳಾಂತರಿಸಿದ್ದೇವೆ. ಅದೇ ಎಫ್‌ಆರ್‌ಪಿ ವಸ್ತುಗಳಿಂದ ಮಾಡಿದ ಇತರ ಪ್ರತಿಮೆಗಳನ್ನು ಪರಿಶೀಲಿಸಲಾಗುತ್ತದೆ, ಶೀಘ್ರವೇ ಆರು ಪ್ರತಿಮೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ