AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ.

Madhya Pradesh: 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು
ಕೊಳವೆ ಬಾವಿ
ನಯನಾ ರಾಜೀವ್
|

Updated on: Jun 07, 2023 | 9:02 AM

Share

300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ.

ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ.

ಮತ್ತಷ್ಟು ಓದಿ: ಕೊಳವೆ ಬಾವಿ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ; ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಇ.ಡಿ. ನೋಟಿಸ್

ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲೆನ್ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ