ಮಧ್ಯಪ್ರದೇಶ: ಭೋಪಾಲ್‌ನ ಚಿಲ್ಡ್ರನ್ ಹೋಮ್ನಿಂದ 26 ಹುಡುಗಿಯರು ನಾಪತ್ತೆ
ಭೋಪಾಲ್‌ನ ಪರ್ವಾಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಚಿಲ್ಡ್ರನ್ ಹೋಮ್ನಿಂದ 26 ಹುಡುಗಿಯರು ನಾಪತ್ತೆಯಾದ ಪ್ರಕರಣವು ನನ್ನ ಗಮನಕ್ಕೆ ಬಂದಿದೆ. ವಿಷಯದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಪರಿಗಣಿಸಿ, ಸರ್ಕಾರವು ಗಮನಹರಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್ ಜನವರಿ 06: ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್ನಿಂದ (children’s home) 26 ಹುಡುಗಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯ ಬಗ್ಗೆ ಗಮನ ಸೆಳೆದಿರುವ ಮಧ್ಯಪ್ರದೇಶದ (Madhya Pradesh) ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan), ರಾಜ್ಯ ಸರ್ಕಾರವು ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಭೋಪಾಲ್‌ನ ಪರ್ವಾಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಚಿಲ್ಡ್ರನ್ ಹೋಮ್ನಿಂದ 26 ಹುಡುಗಿಯರು ನಾಪತ್ತೆಯಾದ ಪ್ರಕರಣವು ನನ್ನ ಗಮನಕ್ಕೆ ಬಂದಿದೆ. ವಿಷಯದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಪರಿಗಣಿಸಿ, ಸರ್ಕಾರವು ಗಮನಹರಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
भोपाल के परवलिया थाना क्षेत्र में बिना अनुमति संचालित बालगृह से 26 बालिकाओं के गायब होने का मामला मेरे संज्ञान में आया है।
मामले की गंभीरता तथा संवेदनशीलता को देखते हुए सरकार से संज्ञान लेने एवं त्वरित कार्रवाई करने का आग्रह करता हूं।
— Shivraj Singh Chouhan (@ChouhanShivraj) January 6, 2024
ಚಿಲ್ಡ್ರನ್ ಹೋಮ್ ವಿರುದ್ಧ ಎಫ್‌ಐಆರ್
ಏತನ್ಮಧ್ಯೆ, ಭೋಪಾಲ್‌ನ ಪರ್ವಾಲಿಯಾ ಸಡಕ್ ಪೊಲೀಸ್ ಠಾಣೆಯು ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಮಕ್ಕಳ ರಕ್ಷಣೆ) ಕಾಯಿದೆ, 2015 ರ ಸೆಕ್ಷನ್‌ಗಳ ಅಡಿಯಲ್ಲಿ ಚಿಲ್ಡ್ರನ್ ಹೋಮ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಪೊಲೀಸರು ಆರೋಪಿ ವ್ಯಕ್ತಿಯನ್ನು ಚಿಲ್ಡ್ರನ್ ಹೋಮ್ ವ್ಯವಸ್ಥಾಪಕ ಅನಿಲ್ ಮೆಥ್ಯೂ ಎಂದು ಹೆಸರಿಸಿದ್ದಾರೆ. ಚಿಲ್ಡ್ರನ್ ಹೋಮ್ ನಲ್ಲಿದ್ದ 68 ಬಾಲಕಿಯಲ್ಲಿ 26 ಮಂದಿ ಕಾಣೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಮಹಿಳೆಯರ ವಿರುದ್ಧ ಅಸಭ್ಯ ಮಾತು: ಮಧ್ಯ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ, ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ತನ್ನ ಎಫ್‌ಐಆರ್‌ನಲ್ಲಿ, ಚಿಲ್ಡ್ರನ್ ಹೋಮ್ನ್ನು ನೋಂದಾಯಿಸಲಾಗಿಲ್ಲ ಮತ್ತು ಇದನ್ನು ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2015 ರ ಅಡಿಯಲ್ಲಿ ನಡೆಸಲಾಗುತ್ತಿಲ್ಲ ಎಂದು ಪೊಲೀಸರು ಗಮನಿಸಿದ್ದಾರೆ. ಘಟನೆಯ ಬಗ್ಗೆ ಗಮನ ಸೆಳೆದಿರುವ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ ಹಕ್ಕುಗಳ (ಎನ್‌ಸಿಪಿಸಿಆರ್) ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ, ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದುಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ