Madhya Pradesh: ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಪತ್ರವನ್ನು ಕಳುಹಿಸಿದ್ದ ಆರೋಪದ ಮೇಲೆ 60 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

Madhya Pradesh: ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ
ದಯಾಸಿಂಗ್Image Credit source: India Today
Follow us
|

Updated on: Apr 28, 2023 | 8:48 AM

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಪತ್ರವನ್ನು ಕಳುಹಿಸಿದ್ದ ಆರೋಪದ ಮೇಲೆ 60 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಯಾತ್ರೆ ಮಧ್ಯಪ್ರದೇಶದ ಇಂದೋರ್‌ ಪ್ರವೇಶಿಸಿದ ಕೂಡಲೇ ರಾಹುಲ್‌ ಗಾಂಧಿ ಮೇಲೆ ಬಾಂಬ್‌ ಹಾಕುವುದಾಗಿ ಪತ್ರ ಕಳುಹಿಸಿ ಬೆದರಿಕೆ ಹಾಕಿದ್ದರು. ಇಂದೋರ್‌ನ ಅಂಗಡಿಯೊಂದರ ಹೊರಗೆ ಪತ್ರ ಪತ್ತೆಯಾಗಿತ್ತು.

ದಯಾಸಿಂಗ್ ಅಲಿಯಾಸ್ ಐಶಿಲಾಲ್ ಝಾಮ್ ರೈಲಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ನಂತರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ.

ಮತ್ತಷ್ಟು ಓದಿ: ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ರಾಹುಲ್ ಗಾಂಧಿ ಘೋಷಣೆ

ಝಾಮ್​ಗೆ ಎನ್‌ಎಸ್‌ಎ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನವೆಂಬರ್ 2022 ರಲ್ಲಿ ಪತ್ರ ಪತ್ತೆಯಾದ ತಕ್ಷಣ, ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಯಿತು ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ