Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ, 8 ಮಂದಿ ಸಾವು

ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರೂಪೇಶ್ ಕುಮಾರ್ ದ್ವಿವೇದಿ, ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಘಾಟಬಿಲ್ಲೋಡ್ ಬಳಿ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ: ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ, 8 ಮಂದಿ ಸಾವು
ಅಪಘಾತ
Follow us
ನಯನಾ ರಾಜೀವ್
|

Updated on: May 16, 2024 | 8:23 AM

ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರೂಪೇಶ್ ಕುಮಾರ್ ದ್ವಿವೇದಿ ಮಾತನಾಡಿ, ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಘಾಟಬಿಲ್ಲೋಡ್ ಬಳಿ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಮಾಹಿತಿಯ ಪ್ರಕಾರ, ರಾತ್ರಿ 10.30 ರ ಸುಮಾರಿಗೆ ಬೊಲೆರೋ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಅಕ್ಕಪಕ್ಕದ ಜನರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತ ತಂಡಗಳು ಮತ್ತು ಆಂಬ್ಯುಲೆನ್ಸ್ ಕೂಡ ಸ್ಥಳಕ್ಕೆ ತಲುಪಿತು. ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಅಪರಿಚಿತ ವಾಹನದ ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ.ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದಕ್ಕೂ ಮೊದಲು ಮೇ 13 ರಂದು ಮಧ್ಯಪ್ರದೇಶದ ಸಿಯೋನಿ, ರಾಜ್‌ಗಢ ಮತ್ತು ಛಿಂದ್ವಾರಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಎಂಟು ಜನರು ಸಾವನ್ನಪ್ಪಿದರು ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸಿಯೋನಿಯಲ್ಲಿ, ಹಿನೋಟಿಯಾ ಗ್ರಾಮದಲ್ಲಿ ಎಸ್‌ಯುವಿ ಪಲ್ಟಿಯಾದಾಗ ವಧು ಮತ್ತು ವರ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಆದಗಾಂವ್ ಪೊಲೀಸ್ ಠಾಣೆಯ ಉಸ್ತುವಾರಿ ಪೂಜಾ ಚೌಕ್ಸೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಟ್ಟಡದ ಬೆಂಕಿ ನಂದಿಸುವಾಗ ಏಕಾಏಕಿ ನೀರು ಖಾಲಿ, ಅಗ್ನಿಯಲ್ಲಿ ಬೆಂದು ಹೋದ ಅಗ್ನಿಶಾಮಕ ಸಿಬ್ಬಂದಿ

ರಾಜ್‌ಗಢದಲ್ಲಿ, ಕುರಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲುಖೇಡಿ ಬಳಿ ರಾಷ್ಟ್ರೀಯ ಹೆದ್ದಾರಿ 46 ರಲ್ಲಿ ಮಿಲಿಟರಿ ಟ್ರಕ್ ಮತ್ತು ಇತರ ಎರಡು ವಾಹನಗಳು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛಿಂದ್ವಾರಾ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಮುವಾರಿ ಗಣಿಗಳಲ್ಲಿ ಎಸ್‌ಯುವಿ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವಧೇಶ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ