Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕನನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಬದುಕುಳಿಯಲಿಲ್ಲ.

ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಸಾವು
ಬೋರ್​ವೆಲ್​ ಒಳಗೆ ಬಿದ್ದಿದ್ದ ಬಾಲಕ ಸಾವು
Follow us
TV9 Web
| Updated By: Rakesh Nayak Manchi

Updated on:Dec 10, 2022 | 9:15 AM

ಬೇತುಲ್/ಮಧ್ಯಪ್ರದೇಶ: ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ (Boy fall into borewell)ನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಅದಾಗಲೇ ಬಾಲಕ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಧ್ಯಪ್ರದೇಶದ (Madhya Pradesh) ಬೇತುಲ್ ಜಿಲ್ಲೆ (Betul district) ಮಾಂಡವಿ​ ಬಳಿ ತನ್ಮಯ್​​ ಸಾಹು ಎಂಬಾತ ಆಟವಾಡುತ್ತಿದ್ದಾಗ ಕೊಳೆವೆಬಾವಿಗೆ ಬಿದ್ದಿದ್ದ. ಕೂಡಲೇ ಬಾಲಕನ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ನಿರಂತರ 80 ಗಂಟೆಗಳ ಕಾಲ ರಕ್ಷಣಾ ಕಾರ್ಯ ನಡೆಸಿ ಬಾಲಕನನ್ನು ಬೋರ್​ವೆಲ್​ನಿಂದ ಮೇಲಕ್ಕೆತ್ತಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಾನಕ್‌ ಚೌಹಾಣ್‌ ಎಂಬುವರು ತಮ್ಮ ಜಮೀನಿನಲ್ಲಿ ಎರಡು ವರ್ಷಗಳ ಹಿಂದೆ ಬೋರ್​ವೆಲ್ ಅನ್ನು ಕೊರೆಸಿದ್ದರು. ಆದರೆ ಈ ಕೊಳೆವೆಬಾವಿ ಬಳಿ ಆಟವಾಡುತ್ತಿದ್ದ ಬಾಲಕ ತನ್ಮಯ್ ಅದರೊಳಗೆ ಬಿದ್ದಿದ್ದಾನೆ. ಕೊರೆದಿದ್ದ ಬೋರ್​ವೆಲ್​ನಲ್ಲಿ ನೀರು ಬಾರದ ಹಿನ್ನೆಲೆ ಅದಕ್ಕೆ ಮುಚ್ಚಳ ಹಾಕಲಾಗಿತ್ತು. ಬಾಲಕ ಮುಚ್ಚಳವನ್ನು ಹೇಗೆ ತೆಗೆದಿದ್ದಾನೆ ಎಂದು ತನಗೆ ಗೊತ್ತಿಲ್ಲ ಎಂದು ನಾನಕ್ ಚೌಹಾಣ್ ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಮಳೆ, ಭೂಕುಸಿತ

ತನ್ಮಯ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿವಿಲ್ ಸರ್ಜನ್ ಅಶೋಕ್ ಬಾರಂಗ ಅವರ ಸಮ್ಮುಖದಲ್ಲಿ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಬೋರ್‌ವೆಲ್‌ನಿಂದ ಹೊರತೆಗೆದಾಗ ಮಗನ ಮುಖವನ್ನೂ ತೋರಿಸಲಿಲ್ಲ ಎಂದು ತನ್ಮಯ್ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು.

ಏನಿದು ಘಟನೆ?

ನಾನಕ್ ಎಂಬವರ ಜಮೀನಿನಲ್ಲಿ ಡಿಸೆಂಬರ್ 6ರಂದು ಬಾಲಕ ತನ್ಮಯ್ ಆಟವಾಡುತ್ತಿದ್ದ. ಈ ವೇಳೆ ಅಲ್ಲೇ ಇದ್ದ 55 ಅಡಿ ಆಳದ ಕೊಳವೆಬಾವಿಗೆ ತನ್ಮಯ್ ಬಿದ್ದಿದ್ದಾನೆ. ಕೂಡಲೇ ವಿಪತ್ತು ನಿರ್ವಹಣಾ ಪಡೆ ಅಥವಾ ಎಸ್‌ಡಿಆರ್‌ಎಫ್‌ ತಂಡವನ್ನು ಸ್ಥಳಕ್ಕೆ ಕರೆಸಿ ಬಾಲಕನ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ಸ್ಥಳಕ್ಕೆ ಮಣ್ಣು ಅಗೆಯುವ ಯಂತ್ರಗಳಿಂದ ರಕ್ಷಣಾ ಕಾರ್ಯ ಆರಂಭಿಸಲಾಗುತ್ತು. ಕೊಳವೆಬಾವಿಯೊಳಗಿದ್ದ ಬಾಲಕಿಗೆ ಆಮ್ಲಜನಕ ನೀಡಲು ವ್ಯವಸ್ಥೆ ಮಾಡಲಾಗಿತ್ತು. ನಿರಂತರ 80 ಗಂಟೆಗಳ ಕಾರ್ಯಾಚರಣೆಯ ನಂತರ ಬಾಲಕನ್ನನ್ನು ಕೊಳವೆಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 am, Sat, 10 December 22

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?