ಮಧ್ಯಪ್ರದೇಶ: ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್​​​ ಪಲ್ಟಿ, 21 ಮಂದಿಗೆ ಗಾಯ

|

Updated on: Apr 20, 2024 | 10:19 AM

lok sabha election 2024: ದೇಶದಲ್ಲಿ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಅನೇಕ ಕಡೆ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದೆ. ಚುನಾವಣೆಗಾಗಿ ಎಲ್ಲ ಕಡೆ ಸುರಕ್ಷತ ಕ್ರಮವಾಗಿ ಭದ್ರತಾ ಪಡೆ ಹಾಗೂ ಪೊಲೀಸರನ್ನು ನೇಮಕ ಮಾಡಲಾಗಿದೆ. ಹೀಗೆ ಚುನಾವಣೆ ಕರ್ತವ್ಯಕ್ಕೆಂದು ಮಧ್ಯಪ್ರದೇಶದ ಬೇತುಲ್ ಜಿಲ್ಲೆಗೆ ಹೋಗಿದ್ದ ಸಿಬ್ಬಂದಿ ತಮ್ಮ ಕರ್ತವ್ಯ ಮುಗಿಸಿ ವಾಪಸ್ಸು ಬರಬೇಕಾದರೆ, ಅವರಿದ್ದ ಬಸ್​​ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ: ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್​​​ ಪಲ್ಟಿ, 21 ಮಂದಿಗೆ ಗಾಯ
ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್​​​ ಪಲ್ಟಿ
Follow us on

ಬೇತುಲ್,ಏ.20: ಇಂದು (ಏ.20) ಮುಂಜಾನೆ ಮಧ್ಯಪ್ರದೇಶದ (Madhya Pradesh) ಬೇತುಲ್ ಜಿಲ್ಲೆಯಲ್ಲಿ ಬಸ್ಸು ಪಲ್ಟಿಯಾದ ಪರಿಣಾಮ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಾಯಗೊಂಡಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಈ ಅಪಘಾತ ನಡೆದಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ (SDOP) ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು (ಹೋಮ್ ಗಾರ್ಡ್)​​​​​ ಸೇರಿದಂತೆ ಒಟ್ಟು 40 ಜನ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಗಾಗಿ ಹೋರಾಡಿದವರು ಪ್ರಾಣ ಪ್ರತಿಷ್ಠಾಪನೆಗೆ ಬಂದ್ರು, ಆದರೆ ಕಾಂಗ್ರೆಸ್​ನವರು ಬರಲಿಲ್ಲ: ಮೋದಿ ಕಿಡಿ

ಈ ಬಸ್​​​ ಛಿಂದ್ವಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಢಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಟ್ರಕ್​​ ತಪ್ಪಿಸಲು ಹೋಗಿ ಬಸ್​​​ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್‌ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.