ಮಧ್ಯಪ್ರದೇಶ: ದೇವಸ್ಥಾನಕ್ಕೆ ಹೊರಟಿದ್ದ 12 ಮಂದಿಯ ಬಲಿ ಪಡೆದ ಬಾವಿ
ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಇತರ 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಇಕೋ ಕಾರು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು ನಂತರ ಬಾವಿಗೆ ಉರುಳಿಬಿದ್ದಿದ್ದು, ಅಪಘಾತದಲ್ಲಿ ಸಿಲುಕಿದ್ದವರಿಗೆ ಅಸ್ತವ್ಯಸ್ತ ಮತ್ತು ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ.ತುರ್ತು ಕರೆ ಬಂದ ಕೂಡಲೇ ಸ್ಥಳೀಯ ಪೊಲೀಸರು ಮತ್ತು ಎಸ್‌ಡಿಒಪಿ, ಪೊಲೀಸ್ ಠಾಣೆ ಮುಖ್ಯಸ್ಥರು ಮತ್ತು ಎಸ್‌ಡಿಎಂ ಸೇರಿದಂತೆ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಮಧ್ಯಪ್ರದೇಶ, ಏಪ್ರಿಲ್ 28: ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ಭೀಕರ ಅಪಘಾತ(Accident) ಸಂಭವಿಸಿದೆ . ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ಇದರಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅವರನೆನ್ಲಲಾ ರಕ್ಷಿಸಲು ಬಾವಿಗೆ ಹಾರಿದ ಯುವಕನೂ ಒಬ್ಬ.
ಡಿಐಜಿ ಮನೋಜ್ ಸಿಂಗ್ ಅಧಿಕೃತವಾಗಿ ಸಾವನ್ನು ದೃಢಪಡಿಸಿದ್ದಾರೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ ನೀಡಲು ರತ್ಲಾಮ್‌ನ ಖೋಜಂಖೇಡಾ ಗ್ರಾಮದಿಂದ ಹೋಗುತ್ತಿದ್ದರು. ನಂತರ ದಾರಿಯಲ್ಲಿ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಇದಾದ ನಂತರ, ಅದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮುಚ್ಚದ ಬಾವಿಗೆ ಬಿದ್ದಿತು. ವ್ಯಾನ್ ಬಾವಿಗೆ ಬಿದ್ದ ನಂತರ ಸ್ಥಳದಲ್ಲಿ ಗೊಂದಲ ಉಂಟಾಯಿತು. ಘಟನೆಯನ್ನು ನೋಡುತ್ತಿದ್ದ ಸ್ಥಳೀಯ ಯುವಕನೊಬ್ಬ ಧೈರ್ಯ ಪ್ರದರ್ಶಿಸಿ ಜನರನ್ನು ರಕ್ಷಿಸಲು ಬಾವಿಗೆ ಹಾರಿದ್ದಾನೆ. ಕೊನೆಗೆ ಆತನೂ ಸಾವನ್ನಪ್ಪಿದ್ದಾನೆ.
ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ, ಪೊಲೀಸರು ಸೇರಿದಂತೆ ಆಡಳಿತ ಸಿಬ್ಬಂದಿ ಸ್ಥಳಕ್ಕೆ ತಲುಪಿದರು. ಇದರೊಂದಿಗೆ ರಕ್ಷಣಾ ಕಾರ್ಯ ಆರಂಭವಾಯಿತು. ಬಾವಿಗೆ ಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಮನೋಹರ್ ಸಿಂಗ್ ಎಂಬ ಸ್ಥಳೀಯ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ:ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಮದ್ವೆ ಮನೆಯಲ್ಲಿ ಸೂತಕ
ಕಾರಿನಲ್ಲಿ 13 ಜನರಿದ್ದರು. ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ವ್ಯಾನ್ ಮೊದಲು ಬೈಕಿಗೆ ಡಿಕ್ಕಿ ಹೊಡೆದು ನಂತರ ಬಾವಿಗೆ ಬಿದ್ದಾಗ ಈ ಘಟನೆ ಸಂಭವಿಸಿದೆ. ಬಾವಿಗೆ ಬಿದ್ದ ನಂತರ, ವ್ಯಾನ್‌ನಿಂದ ಎಲ್‌ಪಿಜಿ ಅನಿಲ ಸೋರಿಕೆಯಾಗಲು ಪ್ರಾರಂಭಿಸಿತು, ಇದರಿಂದಾಗಿ ಒಳಗೆ ಸಿಲುಕಿದ್ದ ಜನರಿಗೆ ಉಸಿರುಗಟ್ಟುವಿಕೆ ಉಂಟಾಗಿತ್ತು.
Saddened by the loss of lives in an accident in Mandsaur, Madhya Pradesh. Condolences to those who have lost their loved ones. May the injured recover soon.
An ex-gratia of Rs. 2 lakh from PMNRF would be given to the next of kin of each deceased. The injured would be given Rs.…
— PMO India (@PMOIndia) April 27, 2025
ಸ್ಥಳೀಯ ಯುವಕನೊಬ್ಬ ಕಾರು ಸವಾರರನ್ನು ರಕ್ಷಿಸಲು ಪ್ರಯತ್ನಿಸಿದನು. ಅವನು ಬಾವಿಗೆ ಹಾರಿದನು ಆದರೆ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಆತ ಕೂಡ ಸಾವನ್ನಪ್ಪಿದ್ದಾನೆ. ಯುವಕನ ಸಾವು ಗ್ರಾಮದಲ್ಲಿ ಶೋಕದ ಅಲೆಯನ್ನು ಸೃಷ್ಟಿಸಿತು. ಭೀಕರ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತೀವ್ರ ದುಃಖ ವ್ಯಕ್ತಪಡಿಸಿದೆ. ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








