ಮಧ್ಯಪ್ರದೇಶ: ಪಿಕ್ಅಪ್ ವಾಹನ ಪಲ್ಟಿಯಾಗಿ 14 ಮಂದಿ ಸಾವು, 21 ಜನರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಪಿಕ್ಅಪ್ ವಾಹನವೊಂದು ಪಲ್ಟಿಯಾಗಿ 14 ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಶಹಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಸಂತ್ರಸ್ತ ಜನರು ದೇವ ಭಾರೈ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ.
ಮಧ್ಯಪ್ರದೇಶದ ದಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಚಿಯಾ-ಬರ್ಜಾರ್ ಗ್ರಾಮದಲ್ಲಿ ಪಿಕಪ್ ನಿಯಂತ್ರಣ ತಪ್ಪಿ 25 ಅಡಿ ಆಳದ ಹೊಲಕ್ಕೆ ಉರುಳಿ ಬಿದ್ದಿದೆ. ಸಿಕ್ಕಿದ ಮಾಹಿತಿಯ ಪ್ರಕಾರ, ಅಪಘಾತದ ಸಮಯದಲ್ಲಿ, ವಾಹನದಲ್ಲಿದ್ದ ಸುಮಾರು 35 ಜನರು ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು.
ಘಟನೆಯ ನಂತರ, ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಶಹಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ, ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮತ್ತಷ್ಟು ಓದಿ:ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು
ದಿಂಡೋರಿ ಜಿಲ್ಲೆಯಲ್ಲಿ ವಾಹನ ಅಪಘಾತದಲ್ಲಿ ಅನೇಕ ಅಮೂಲ್ಯ ಜೀವಗಳ ಅಕಾಲಿಕ ಮರಣಕ್ಕೆ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಅಮಾದೇವಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರ ವಿಡಿಯೋ
#WATCH | Madhya Pradesh: 14 people died and 20 injured after a pick-up vehicle lost control and overturned at Badjhar ghat in Dindori. Injured are undergoing treatment at Shahpura Community Health Centre: Vikas Mishra, Dindori Collector
(Visuals of the injured who are undergoing… pic.twitter.com/24CjMnprEb
— ANI MP/CG/Rajasthan (@ANI_MP_CG_RJ) February 29, 2024
ಜಾರ್ಖಂಡ್‌ನಲ್ಲಿ ರೈಲು ಡಿಕ್ಕಿಯಾಗಿ 12 ಜನ ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು ಜಾರ್ಖಂಡ್‌ನ ಜಮ್ತಾರ ಜಿಲ್ಲೆಯಲ್ಲಿ ಇಂದು (ಫೆಬ್ರವರಿ 28) ಸಂಜೆ ಭೀಕರ ರೈಲು (Jamtara Train Accident) ದುರಂತ ಸಂಭವಿಸಿದೆ. ಜಮ್ತಾರ ಜಿಲ್ಲೆಯ ಕಲಝಾರಿಯ (Kalajharia) ರೈಲು ನಿಲ್ದಾಣದ ಬಳಿ ರೈಲು ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.
ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯೂ ಕೂಡಲೇ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಳಲ್ಲಿ ರಕ್ಷಣಾ ಕಾರ್ಯನಡೆದಿದೆ ಎಂದು ತಿಳಿದುಬಂದಿದೆ.
ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಹರಡಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಿದ್ದಾರೆ. ಅಷ್ಟೇ ಅಲ್ಲ, ಆತಂಕದಲ್ಲಿ ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಆದರೆ, ದುರದೃಷ್ಟವಶಾತ್, ಮತ್ತೊಂದು ಕಡೆಯಿಂದ ಬರುತ್ತಿದ್ದ ಝಾಝಾ-ಅಸನೋಲ್ ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ