ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಅನಿಯಂತ್ರಿತ ಡಂಪರ್ ಟ್ರಕ್ ಮದುವೆ ಮೆರವಣಿಗೆಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಹೋಶಂಗಾಬಾದ್ ಜಿಲ್ಲೆಯ ಅಂಚಲಖೇಡಾದಿಂದ ಮೆರವಣಿಗೆ ಆಗಮಿಸಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 45ರ ಘಾಟ್ ಖಮಾರಿಯಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ,ಗಾಯಗೊಂಡವರಿಗೆ ಆರಂಭದಲ್ಲಿ ಸುಲ್ತಾನ್‌ಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು, ನಂತರ ಅವರೆಲ್ಲರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಭೋಪಾಲ್‌ಗೆ ಕಳುಹಿಸಲಾಯಿತು.
ಅಪಘಾತದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅರವಿಂದ್ ಕುಮಾರ್ ದುಬೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ಸೆಹ್ವಾಲ್ ಅವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸೆಹ್ವಾಲ್ ಹೇಳಿದರು, ಅಪಘಾತದ ನಂತರ ಡಂಪರ್ ಟ್ರಕ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಏತನ್ಮಧ್ಯೆ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತ್ರಸ್ತರ ಸಂಬಂಧಿಕರಿಗೆ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ತಡ ರಾತ್ರಿ ಇಡೀ ಕಾರು ಭಸ್ಮ
ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಕಾರು, ಆರು ಮಂದಿ ಸಾವು
ಹರ್ಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ಕಾರೊಂದು ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಎಕ್ಸ್‌ಯುವಿ ಖಾಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿತ್ತು. ಘರ್ಷಣೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.
ಖಾರ್ಖರ ಗ್ರಾಮದ ಬಳಿ ಕೆಲವರು ಸ್ಟೆಪ್ನಿಯಿಂದ ನಿಲ್ಲಿಸಿದ್ದ ವಾಹನದ ಟೈರ್ ಬದಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ. ನಿಂತಿದ್ದ ವಾಹನಕ್ಕೆ ಎಕ್ಸ್‌ಯುವಿ ಡಿಕ್ಕಿ ಹೊಡೆದ ನಂತರ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. XUV ಅದೇ ಹೌಸಿಂಗ್ ಸೊಸೈಟಿಯಲ್ಲಿ ವಾಸಿಸುವ ಜನರನ್ನು ಹೊತ್ತೊಯ್ಯುತ್ತಿತ್ತು. ಸಂತ್ರಸ್ತರ ಮರಣೋತ್ತರ ಪರೀಕ್ಷೆ ವರದಿ ನಡೆಯಲಿದೆ.
ಸಸಾರಂನಲ್ಲಿ ಟ್ರಕ್ ಹರಿದು ಓರ್ವ ಸಾವು
ಸಸಾರಂನ ಅರಾ-ಸಸಾರಂ ರಸ್ತೆಯ ನೋಖಾ ಪೊಲೀಸ್ ಠಾಣೆ ವ್ಯಾಪ್ತಿಯ ಪೆನಾರ್ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಗಾಯಾಳುಗಳು ರಸ್ತೆಗೆ ಬಿದ್ದಿದ್ದಾರೆ.ವೇಗವಾಗಿ ಬಂದ ಟ್ರಕ್ ಇಬ್ಬರು ಬೈಕ್ ಸವಾರರನ್ನು ನುಜ್ಜುಗುಜ್ಜುಗೊಳಿಸಿದೆ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಘೋರ್ಡಿಹಿ ಗ್ರಾಮದ ನಿವಾಸಿ ಸುನಿಲ್ ಚೌಧರಿ ಎಂದು ಗುರುತಿಸಲಾಗಿದೆ.