AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಲ್ಖೇಡಾದಲ್ಲಿ ಕಾಲುವೆಗೆ ಕಾರು ಉರುಳಿಬಿದ್ದು 8 ಜನ ಸಾವು

ಮಧ್ಯಪ್ರದೇಶದ ಆಗರ್ ಮಾಲ್ವಾ ಜಿಲ್ಲೆಯ ನಲ್ಖೇಡಾದಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಭಕ್ತರಿದ್ದ ಕಾರು ತಾಯಿ ಬಗಲಾಮುಖಿ ದೇವಸ್ಥಾನದ ಸಮೀಪ ಕಾಲುವೆಗೆ ಉರುಳಿ ಬಿದ್ದು ಕೊಚ್ಚಿಹೋಗಿದೆ. ಘಟನೆಯಲ್ಲಿ 3 ಮಕ್ಕಳು, 2 ಮಹಿಳೆಯರು ಹಾಗೂ 3 ಪುರುಷರು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶ: ನಲ್ಖೇಡಾದಲ್ಲಿ ಕಾಲುವೆಗೆ ಕಾರು ಉರುಳಿಬಿದ್ದು 8 ಜನ ಸಾವು
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Sep 19, 2026 | 1:19 PM

Share

ಭೋಪಾಲ್, ಸೆಪ್ಟೆಂಬರ್ 19: ಮಧ್ಯಪ್ರದೇಶದ ಆಗರ್ ಮಾಲ್ವಾ ಜಿಲ್ಲೆಯ ನಲ್ಖೇಡಾದಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ತೀವ್ರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿದ್ದ ಕಾಲುವೆಯ ನೀರಿನ ಸೆಳೆತಕ್ಕೆ ಭಕ್ತರಿದ್ದ ಕಾರು ಉರುಳಿಬಿದ್ದು ಕೊಚ್ಚಿಹೋಗಿದೆ. ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ನಲ್ಖೇಡಾದ ಪ್ರಸಿದ್ಧ ತಾಯಿ ಬಗಲಾಮುಖಿ ದೇವಸ್ಥಾನಕ್ಕೆ ದರ್ಶನಕ್ಕಾಗಿ ಭಕ್ತರು ಆಗಮಿಸಿದ್ದರು. ರಾತ್ರಿಭಾರಿ ಮಳೆಯಾಗಿದ್ದು, ಇದರಿಂದ ದೇವಸ್ಥಾನದ ಸಮೀಪದ ನಾಲೆಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾಗಿದೆ. ಈ ವೇಳೆ ನಾಲೆಯ ಬಳಿ ಸಾಗುತ್ತಿದ್ದ ಕಾರು ನೀರಿನ ರಭಸಕ್ಕೆ ಸಿಲುಕಿ ನಾಲೆಗೆ ಉರುಳಿದ್ದು ಕೊಚ್ಚಿಹೋಗಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯಾಡಳಿತ ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ನಾಲೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಭಾರಿ ನೀರಿನ ಹರಿವಿನಿಂದ ರಕ್ಷಣಾ ಕಾರ್ಯಕ್ಕೂ ತೊಂದರೆಯಾಗಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ 3 ಮಕ್ಕಳು, 2 ಮಹಿಳೆಯರು ಹಾಗೂ 3 ಪುರುಷರು ಸೇರಿದ್ದಾರೆ. ಮೃತರೆಲ್ಲರೂ ನಲ್ಖೇಡಾದಲ್ಲಿ ದೇವರ ದರ್ಶನಕ್ಕಾಗಿ ಬಂದಿದ್ದ ಭಕ್ತರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಚಿಕ್ಕಮ್ಮನ ಕೈಯಲ್ಲಿದ್ದ 6 ತಿಂಗಳ ಮಗುವಿನ ಮೇಲೆ ಪಿಟ್​ಬುಲ್ ಅಟ್ಯಾಕ್

ದುರ್ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಗುರುತು ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ