Breaking: ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ, ಮೂವರು ಸಾವು, 25ಕ್ಕೂ ಅಧಿಕ ಜನರಿಗೆ ಗಾಯ
ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ಮಧ್ಯಪ್ರದೇಶದ ಜಬಲ್ಪುರದಲ್ಲಿ ಪಲ್ಟಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಮೃತರನ್ನು ಹೈದರಾಬಾದ್ ನಿವಾಸಿ ಮಾಲ್ಮಾ (45), ಶುಭಂ ಮೆಶ್ರಮ್ (28) ಮತ್ತು ಅಮೋಲ್ ಖೋಡೆ (42) ಎಂದು ಗುರುತಿಸಲಾಗಿದ್ದು, ಇಬ್ಬರೂ ನಾಗ್ಪುರ ನಿವಾಸಿಗಳು ಎಂದು ಅಧಿಕಾರಿ ತಿಳಿಸಿದ್ದಾರೆ.

ಜಬಲ್ಪುರ, ಮಾರ್ಚ್ 23: ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ಮಧ್ಯಪ್ರದೇಶದ ಜಬಲ್ಪುರದಲ್ಲಿ ಪಲ್ಟಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಮೃತರನ್ನು ಹೈದರಾಬಾದ್ ನಿವಾಸಿ ಮಾಲ್ಮಾ (45), ಶುಭಂ ಮೆಶ್ರಮ್ (28) ಮತ್ತು ಅಮೋಲ್ ಖೋಡೆ (42) ಎಂದು ಗುರುತಿಸಲಾಗಿದ್ದು, ಇಬ್ಬರೂ ನಾಗ್ಪುರ ನಿವಾಸಿಗಳು ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಲಖ್ನಾದಾನ್ ಪಟ್ಟಣ ಮತ್ತು ಜಬಲ್ಪುರ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಬಸ್ಸು ಉತ್ತರ ಪ್ರದೇಶದ ಅಯೋಧ್ಯೆಯಿಂದ ಮಹಾರಾಷ್ಟ್ರದ ನಾಗ್ಪುರಕ್ಕೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಾಹನ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನ್‌ಪುರ ಘಾಟಿ ಪ್ರದೇಶದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:07 pm, Sun, 23 March 25