Chitrakoot Accident: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

ಮಧ್ಯಪ್ರದೇಶದ ಚಿತ್ರಕೂಟ ಜಿಲ್ಲೆಯ ಅಮನ್‌ಪುರದಲ್ಲಿ ವೇಗವಾಗಿ ಬಂದ ಟ್ರಕ್ ಇ-ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಮೊರೆನಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ್ದ ಮತ್ತೊಂದು ಅಪಘಾತದಲ್ಲಿ 30 ಜನ ಗಾಯಗೊಂಡಿದ್ದಾರೆ.

Chitrakoot Accident: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Apr 02, 2024 | 9:35 AM

ಭೋಪಾಲ್, ಏಪ್ರಿಲ್ 2: ಮಧ್ಯಪ್ರದೇಶದ (Madhya Pradesh) ಚಿತ್ರಕೂಟದಲ್ಲಿ (Chitrakoot) ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಚಿತ್ರಕೂಟದ ಅಮನ್‌ಪುರದಲ್ಲಿ ಎನ್‌ಎಚ್ 35 ರಲ್ಲಿ ವೇಗವಾಗಿ ಬಂದ ಟ್ರಕ್ಕೊಂದು ಇ-ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಝಾನ್ಸಿ ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದೆ. ಸದ್ಯ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿರುವುದಾಗಿ ‘ಎಎನ್​’ ಸುದ್ದಿಸಂಸ್ಥೆ ಸಾಮಾಮಜಿಕ ಮಾಧ್ಯಮ ಎಕ್ಸ್​ ಸಂದೇಶದಲ್ಲಿ ತಿಳಿಸಿದೆ.

ಎಎನ್​ಐ ಎಕ್ಸ್ ಸಂದೇಶ

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪ್ರಯಾಗ್​​ರಾಜ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಪೈಕಿ ಐವರ ಗುರುತು ಪತ್ತೆಯಾಗಿದೆ. ಉಳಿದವರು ಇಬ್ಬರ ಗುರುತು ಪತ್ತೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಎಸ್‌ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ.

ಇದನ್ನೂ ಓದಿ: ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಮನವಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ನಂತರ, ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಚಿತ್ರಕೂಟ ರೈಲು ನಿಲ್ದಾಣದಿಂದ ರಾಮಘಾಟ್ ಕಡೆಗೆ ಆಟೋ ಹೋಗುತ್ತಿದ್ದು, ಅದರಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಆಟೋ ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ, ಮುಂಭಾಗದಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ.

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ್ದ ಮತ್ತೊಂದು ಅಪಘಾತದಲ್ಲಿ, ಬಸ್ ಪಲ್ಟಿಯಾಗಿ ಕನಿಷ್ಠ 30 ಜನರು ಗಾಯಗೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 2 April 24

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್