ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಪಿಕ್ನಿಕ್​ಗೆ ಹೋಗಿದ್ದ ಯುವತಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ
ಅಪರಾಧ
Follow us
|

Updated on: Sep 12, 2024 | 10:50 AM

ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿರುವ ಆರ್ಮಿ ವಾರ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಮೇಜರ್ ಶ್ರೇಣಿಯ ಅಧಿಕಾರಿಗಳು ಜಾಮ್ ಗೇಟ್ ಪ್ರದೇಶದಲ್ಲಿ ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಪಿಕ್ನಿಕ್‌ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ.

ಎಂಟರಿಂದ ಹತ್ತು ಜನರು ಪಿಸ್ತೂಲುಗಳು, ಚಾಕು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಹಿಡಿದು ಬಂದಿದ್ದರು, ಅವರ ಕಾರನ್ನು ಸುತ್ತುವರೆದರು. ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ನಾಲ್ಕು ಮಂದಿಗೂ ಥಳಿಸಿದ್ದಾರೆ. ಬಳಿಕ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.

ಮತ್ತಷ್ಟು ಓದಿ: ಬರ್ತ್​ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಬಳಿಕ ಅವರೊಂದಿಗಿದ್ದ ಯುವತಿಯನ್ನು ಒತ್ತೆಯಾಳಾಗಿರಿಸಿಕೊಂಡು 10 ಲಕ್ಷ ರೂ. ಕೊಡುವಂತೆ ಕೇಳಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ನಾಲ್ಕು ಜನರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರ ಪ್ರಕಾರ, ಅಧಿಕಾರಿಗಳ ದೇಹದಲ್ಲಿ ಗಾಯಗಳ ಚಿಹ್ನೆಗಳು ಇವೆ. ದಾಳಿಕೋರರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವೈದ್ಯಕೀಯ ವರದಿ ದೃಢಪಡಿಸಿದೆ.

ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಇಂದೋರ್ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹತ್ತು ತಂಡಗಳನ್ನು ಕೂಡ ರಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ, ಪ್ರಕರಣವನ್ನು ಭೇದಿಸಲು 10 ತಂಡಗಳನ್ನು ರಚಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್