ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

|

Updated on: Sep 12, 2024 | 10:50 AM

ಪಿಕ್ನಿಕ್​ಗೆ ಹೋಗಿದ್ದ ಯುವತಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ
ಅಪರಾಧ
Follow us on

ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿರುವ ಆರ್ಮಿ ವಾರ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಮೇಜರ್ ಶ್ರೇಣಿಯ ಅಧಿಕಾರಿಗಳು ಜಾಮ್ ಗೇಟ್ ಪ್ರದೇಶದಲ್ಲಿ ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಪಿಕ್ನಿಕ್‌ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ.

ಎಂಟರಿಂದ ಹತ್ತು ಜನರು ಪಿಸ್ತೂಲುಗಳು, ಚಾಕು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಹಿಡಿದು ಬಂದಿದ್ದರು, ಅವರ ಕಾರನ್ನು ಸುತ್ತುವರೆದರು. ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ನಾಲ್ಕು ಮಂದಿಗೂ ಥಳಿಸಿದ್ದಾರೆ. ಬಳಿಕ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.

ಮತ್ತಷ್ಟು ಓದಿ: ಬರ್ತ್​ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಬಳಿಕ ಅವರೊಂದಿಗಿದ್ದ ಯುವತಿಯನ್ನು ಒತ್ತೆಯಾಳಾಗಿರಿಸಿಕೊಂಡು 10 ಲಕ್ಷ ರೂ. ಕೊಡುವಂತೆ ಕೇಳಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ನಾಲ್ಕು ಜನರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರ ಪ್ರಕಾರ, ಅಧಿಕಾರಿಗಳ ದೇಹದಲ್ಲಿ ಗಾಯಗಳ ಚಿಹ್ನೆಗಳು ಇವೆ. ದಾಳಿಕೋರರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವೈದ್ಯಕೀಯ ವರದಿ ದೃಢಪಡಿಸಿದೆ.

ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಇಂದೋರ್ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹತ್ತು ತಂಡಗಳನ್ನು ಕೂಡ ರಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ, ಪ್ರಕರಣವನ್ನು ಭೇದಿಸಲು 10 ತಂಡಗಳನ್ನು ರಚಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ