AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ

ರಾಜಸ್ಥಾನದ ನಂತರ ಇದೀಗ ಮಧ್ಯಪ್ರದೇಶದಲ್ಲೂ ಬಾಲಕ ಬೋರ್‌ವೆಲ್‌ಗೆ ಬಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ಸಂಜೆ ಎಂಪಿಯ ಗುನಾ ಜಿಲ್ಲೆಯಲ್ಲಿ 10 ವರ್ಷದ ಬಾಲಕ 140 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದಾನೆ.ಸುಮಾರು 39 ಅಡಿ ಆಳದಲ್ಲಿ ಆತ ಸಿಲುಕಿದ್ದಾನೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Madhya Pradesh: 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ
ಬೋರ್​ವೆಲ್
ನಯನಾ ರಾಜೀವ್
|

Updated on: Dec 29, 2024 | 10:09 AM

Share

ಹತ್ತು ವರ್ಷದ ಬಾಲಕ 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. bAlk 39 ಅಡಿ ಆಳದಲ್ಲಿ ಸಿಲುಕಿದ್ದಾನೆ. ಅನೇಕ ತಂಡಗಳನ್ನು ಒಳಗೊಂಡ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಶನಿವಾರ ರಾತ್ರಿಯಿಂದ ಆತನನ್ನು ರಕ್ಷಿಸುವ ಪ್ರಯತ್ನ ಮುಂದುವರೆದಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ಪೊಲೀಸರ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ರಕ್ಷಣಾ ತಂಡಗಳು 40 ಅಡಿಗಳವರೆಗೆ ಸಮಾನಾಂತರ ಹೊಂಡವನ್ನು ಅಗೆದು ಬಾಲಕನನ್ನು ಉಳಿಸುವ ಪ್ರಯತ್ನವನ್ನು ಮುಂದುವರೆಸಿದ್ದಾರೆ ಎಂದು ಡಿಸಿ ಸತ್ಯೇಂದ್ರ ಸಿಂಗ್ ತಿಳಿಸಿದ್ದಾರೆ. ಮಗುವನ್ನು ಸುರಕ್ಷಿತವಾಗಿಡಲು ಆಮ್ಲಜನಕ ಸರಬರಾಜು ಮಾಡಲಾಗುತ್ತಿದೆ.

ರಾಜಸ್ಥಾನದಲ್ಲಿ ಇಂಥದ್ದೇ ಘಟನೆ ನಡೆದಿತ್ತು ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಚೇತನಾ ಎಂಬ ಮಗು ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು.

ಮತ್ತಷ್ಟು ಓದಿ: Video: 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 5 ವರ್ಷದ ಬಾಲಕ

ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯ ಆಡಳಿತದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೆಸಿಬಿ ಯಂತ್ರದ ಸಹಾಯದಿಂದ ಬೋರ್‌ವೆಲ್‌ ಬಳಿ ಅಗೆಯುವ ಕಾರ್ಯ ಆರಂಭವಾಗಿದೆ. ಸಿಕ್ಕಿಬಿದ್ದ ಮಗುವಿಗೆ ಆಹಾರ ಪೂರೈಸುವ ಪ್ರಯತ್ನವೂ ನಡೆಯುತ್ತಿದೆ. ಘಟನೆ ವೇಳೆ ಕುಟುಂಬದ ಸದಸ್ಯರು ಮನೆಯೊಳಗಿದ್ದರು. ಬಳಿಕ ಬಾಲಕಿಯನ್ನು ರಕ್ಷಿಸಲಾಯಿತಾದರೂ ಬದುಕುಳಿಯಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ