ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​

| Updated By: ರಾಜೇಶ್ ದುಗ್ಗುಮನೆ

Updated on: Dec 26, 2020 | 1:35 PM

ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. 

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್
Follow us on

ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ- 2020 ಕ್ಕೆ ಮಧ್ಯ ಪ್ರದೇಶ ಶಿವ್ರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಸಚಿವ ಸಂಪುಟ​ ಒಪ್ಪಿಗೆ ನೀಡಿದೆ.ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರದ ಪ್ರಯತ್ನಕ್ಕೆ ಕನಿಷ್ಠ 50 ಸಾವಿರ ದಂಡ ಮತ್ತು 2 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಬಲವಂತದ ಮತಾಂತರಕ್ಕೆ ಯತ್ನಿಸುವವರಿಗೆ 1 ರಿಂದ 5 ವರ್ಷದವರೆಗೆ ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ದಂಡವನ್ನೂ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಮತಾಂತರವಾಗುವ ಇಚ್ಛೆಯುಳ್ಳವರು ಎರಡು ತಿಂಗಳ‌ ಮೊದಲೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿರಬೇಕು ಎಂಬ ಆಯ್ಕೆಯನ್ನೂ ನೀಡಲಾಗಿದೆ. ಡಿಸೆಂಬರ್ 28 ರಿಂದ ನಡೆಯಲಿರುವ ಮೂರು ದಿನಗಳ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದೆ. ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ, ಈಗ ಅಸ್ತಿತ್ವದಲ್ಲಿರುವ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ -1968 ಕ್ಕೆ ಪರ್ಯಾಯ ಕಾಯ್ದೆಯಾಗಿ ಜಾರಿಗೆ ಬರಲಿದೆ.

ಇನ್ನು, ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. ಉತ್ತರ ಪ್ರದೇಶ ಮತ್ತು ಅರುಣಾಚಲ ಪ್ರದೇಶಗಳ ನಂತರ ಮಧ್ಯ ಪ್ರದೇಶ ‘ಲವ್ ಜಿಹಾದ್’ ವಿರುದ್ಧ ಮಸೂದೆಗೆ ಒಪ್ಪಿಗೆ ನೀಡಿರುವ ಮೂರನೆ ರಾಜ್ಯವಾಗಿದೆ.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು