Madhya Pradesh: ಕಾರು – ಟ್ರಕ್​ ಡಿಕ್ಕಿ, 6 ಮಂದಿ ಸಾವು, ಒಬ್ಬರಿಗೆ ಗಾಯ

ಎಸ್‌ಯುವಿ ಕಾರು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Madhya Pradesh: ಕಾರು - ಟ್ರಕ್​ ಡಿಕ್ಕಿ, 6 ಮಂದಿ ಸಾವು, ಒಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
Edited By:

Updated on: Jul 17, 2023 | 10:14 AM

ಸಾಗರ್ : ಎಸ್‌ಯುವಿ ಕಾರು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶ(Madhya Pradesh) ಸಾಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸನೋಧಾ ಜಟಾಶಂಕರ ಕಣಿವೆ ಬಳಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಏಳು ಜನರಿದ್ದರು. ಅವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಅಭಿಷೇಕ್ ತಿವಾರಿ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈಗಾಗಲೇ ಟ್ರಕ್ ಚಾಲಕ ಯಾರೆಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಕಾರ್ಯಚರಣೆ ನಡೆಯುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಾರು ಸಾಗರದಿಂದ ಗಡಕೋಟಾ ಕಡೆಗೆ ಹೋಗುತ್ತಿದ್ದು, ಟ್ರಕ್ ಗಢಕೋಟಾದಿಂದ ಸಾಗರ ಕಡೆಗೆ ಬರುತ್ತಿತ್ತು. ಈ ಸಮಯದಲ್ಲಿ ಕಾರು ಮತ್ತು ಟ್ರಕ್​​ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಪರಿಣಾಮ ಪಕ್ಕದಲ್ಲೇ ಇದ್ದ ಮರಕ್ಕೆ ಹೋಗಿ ಕಾರು ಗುದ್ದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಉಪವಿಭಾಗದ ಪೊಲೀಸ್ ಅಧಿಕಾರಿ ಅಶೋಕ್ ಚೌರಾಸಿಯಾ ಮಕ್ರೋನಿಯಾ, ಮುಖ್ಯ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ದುಬೆ, ಪೊಲೀಸ್ ಠಾಣೆಯ ಪ್ರಭಾರಿ ಅಜಯ್ ಶಾಕ್ಯಾ ಬಹೇರಿಯಾ ಮತ್ತು ದಿವ್ಯಾ ಪ್ರಕಾಶ್ ತ್ರಿಪಾಠಿ ಅಪಘಾತದ ನಡೆದ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ