ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್

ಬಿಜೆಪಿ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಮೋಹನ್ ಯಾದವ್ ಅವರ ಹೆಸರು ಘೋಷಿಸುತ್ತಿದ್ದಂತೆ ನಿಯೋಜಿತ ಮುಖ್ಯಮಂತ್ರಿಯ ಹಳೇ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಉಜ್ಜಯಿನಿಯಲ್ಲಿ ಖಡ್ಗ ಝಳಪಿಸಿ ಕೌಶಲ ತೋರಿಸುತ್ತಿರುವ ವಿಡಿಯೊ ಇದಾಗಿದೆ.

ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್
ಮೋಹನ್ ಯಾದವ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 12, 2023 | 1:34 PM

ದೆಹಲಿ ಡಿಸೆಂಬರ್ 12: ಬಿಜೆಪಿಯು (BJP) ಮೋಹನ್ ಯಾದವ್ (Mohan Yadav) ಅವರನ್ನು ಮಧ್ಯಪ್ರದೇಶದ (Madhya Pradesh) ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುತ್ತಿದ್ದಂತೆ, ಅವರು ಖಡ್ಗವನ್ನು ಝಳಪಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೊ ಡಿಸೆಂಬರ್ 2019ರದ್ದು. ಬಿಜೆಪಿ ಆಯ್ಕೆ ಮಾಡಿರುವ ನೂತನ ಸಿಎಂನ ಕತ್ತಿ ಕೌಶಲ ನೋಡಿ ಎಂಬ ಬರಹದೊಂದಿಗೆ ಈ ಹಳೇ ವಿಡಿಯೊ ವೈರಲ್ ಆಗಿದೆ.

ವಿಡಿಯೊ ಡಿಸೆಂಬರ್ 2019ರದ್ದು ಎಂದು ವರದಿಯಾಗಿದೆ.ಆದರೆ ಇದು ರಾಜ್ಯದ ಮುಂದಿನ ಮುಖ್ಯಮಂತ್ರಿಯ ಇನ್ನೊಂದು ಭಾಗವನ್ನು ಚಿತ್ರಿಸುವುದರಿಂದ ಅಂತರ್ಜಾಲದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಇದು ಉಜ್ಜಯಿನಿಯಲ್ಲಿ ಅವರು ಪ್ರದರ್ಶಿಸಿದ್ದು ಎಂದು ಹೇಳಲಾಗಿದೆ.

ಯಾದವ್ ಅವರನ್ನು ಹೊಸ ಸಿಎಂ ಎಂದು ಬಿಜೆಪಿ ಘೋಷಿಸಿದ ನಂತರ, ಅವರ ತಂದೆ ಪೂನಂ ಚಂದ್ ಯಾದವ್ ಅವರು ನಿರ್ಧಾರದ ಬಗ್ಗೆ ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಯಾದವ್ ಅವರು ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು . ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕತ್ವವನ್ನು ಅಧಿಕೃತವಾಗಿ ಘೋಷಿಸಿದವರು ಶಿವರಾಜ್ ಸಿಂಗ್ ಚೌಹಾಣ್.

“ನನ್ನ ಮಗ ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಆದರೆ ಇದು ಮಾತೆ ಮತ್ತು ಬಾಬಾ ಮಹಾಕಾಲ್ ಅವರ ಆಶೀರ್ವಾದ” ಎಂದು ಪೂನಂ ಚಂದ್ ಯಾದವ್ ಹೇಳಿದರು. ಯಾದವ್ 2013 ರಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು.

ಇದನ್ನೂ ಓದಿ:  ವಿದ್ಯಾರ್ಥಿ ನಾಯಕನಿಂದ ಮುಖ್ಯಮಂತ್ರಿ ಸ್ಥಾನದವರೆಗೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ರಾಜಕೀಯ ಪಯಣ

2018 ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ, ಅವರು ಮತ್ತೊಮ್ಮೆ ಚುನಾಯಿತರಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾದರು. ಇದಕ್ಕೂ ಮುನ್ನ ಜುಲೈ 2, 2020 ರಂದು ಅವರು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರದಲ್ಲಿ ಸಂಪುಟ ಸಚಿವರಾಗಿದ್ದರು. ಮೋಹನ್ ಯಾದವ್ ನಿಯೋಜಿತ ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರೊಂದಿಗೆ ಡಿಸೆಂಬರ್ 13 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ