AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತದ ಮತಾಂತರಕ್ಕೆ ಮರಣದಂಡನೆ? ಚರ್ಚೆಗೆ ಗ್ರಾಸವಾಗ್ತಿದೆ ಮಧ್ಯ ಪ್ರದೇಶ ಸಿಎಂ ಹೇಳಿಕೆ

ಅಪ್ರಾಪ್ತ ಬಾಲಕಿಯರ ಬಲವಂತದ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ತರುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದ್ದಾರೆ. ಈ ಘೋಷಣೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಲವಂತದ ಮತಾಂತರದ ವ್ಯಾಖ್ಯಾನವನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದೆ. ಹೇಳಿಕೆಯು ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.

ಬಲವಂತದ ಮತಾಂತರಕ್ಕೆ ಮರಣದಂಡನೆ? ಚರ್ಚೆಗೆ ಗ್ರಾಸವಾಗ್ತಿದೆ ಮಧ್ಯ ಪ್ರದೇಶ ಸಿಎಂ ಹೇಳಿಕೆ
ಬಲವಂತದ ಮತಾಂತರಕ್ಕೆ ಮರಣದಂಡನೆ? ಚರ್ಚೆಗೆ ಗ್ರಾಸವಾಗ್ತಿದೆ ಮಧ್ಯ ಪ್ರದೇಶ ಸಿಎಂ ಹೇಳಿಕೆ
Ganapathi Sharma
|

Updated on:Mar 10, 2025 | 7:41 AM

Share

ಭೋಪಾಲ್, ಮಾರ್ಚ್ 10: ಅಪ್ರಾಪ್ತ ವಯಸ್ಸಿನ ಬಾಲಕಿಯರ ಬಲವಂತದ ಮತಾಂತರಕ್ಕೆ (Religious Conversion) ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ (Mohan Yadav ಹೇಳಿದ್ದಾರೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಹೇಗೆ ಮರಣದಂಡನೆ ಶಿಕ್ಷೆಯ ಕಾನೂನು ಇರುವಂತೆಯೇ ಬಲವಂತದ ಧಾರ್ಮಿಕ ಮತಾಂತರಕ್ಕೂ ಮರಣದಂಡನೆ ವಿಧಿಸುವುದಾಗಿ ಅವರು ಘೋಷಿಸಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಭೋಪಾಲ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್​ನಿಂದ ಆಕ್ಷೇಪವೂ ವ್ಯಕ್ತವಾಗಿದೆ. ಮುಗ್ಧ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರ ವಿರುದ್ಧ ಸರ್ಕಾರವು ತುಂಬಾ ಕಟ್ಟುನಿಟ್ಟಾಗಿದೆ. ಅಂತಹವರಿಗೆ ಮುಂದೆ ಮರಣದಂಡನೆ ವಿಧಿಸಲಾಗುತ್ತದೆ. ಬಲವಂತದ ಧಾರ್ಮಿಕ ಮತಾಂತರಕ್ಕೆ ಮರಣದಂಡನೆ ವಿಧಿಸಲು ಅವಕಾಶ ಕಲ್ಪಿಸಿ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು. ಕಾನೂನುಬಾಹಿರ ಮತಾಂತರದಲ್ಲಿ ತೊಡಗುವವರನ್ನು ರಾಜ್ಯ ಸರ್ಕಾರ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಸರ್ಕಾರವು ಬಲವಂತದ ಧಾರ್ಮಿಕ ಮತಾಂತರದ ತಪ್ಪುಗಳು ಮತ್ತು ಅಂತಹ ದುಷ್ಕೃತ್ಯಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಎದುರಿಸಲಿದೆ ಎಂದು ಮೋಹನ್ ಯಾದವ್ ಫೇಸ್‌ಬುಕ್ ಪೋಸ್ಟ್‌ನಲ್ಲಿಯೂ ತಿಳಿಸಿದ್ದಾರೆ. ಮಧ್ಯಪ್ರದೇಶ ಸರ್ಕಾರ ಹೆಣ್ಣು ಮಕ್ಕಳ ಸ್ವಾಭಿಮಾನ ಮತ್ತು ರಕ್ಷಣೆಗೆ ಸಮರ್ಪಿತವಾಗಿದೆ ಎಂದು ಅವರು ಹೇಳಿದ್ದಾರೆ.

ಮೋಹನ್ ಯಾದವ್ ಹೇಳಿಕೆಯ ವಿಡಿಯೋ

ಭೋಪಾಲ್‌ನಲ್ಲಿ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆಯಾದ ‘ಲಾಡ್ಲಿ ಬೆಹ್ನಾ ಯೋಜನೆ’ಯ 1.27 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗಳಿಗೆ 1,552.73 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದರು.

ಇದನ್ನೂ ಓದಿ
Image
ಹೋಟೆಲ್​ಗೆ ಪಾರ್ಟಿಗೆಂದು ಹೋದ ಮಹಿಳೆಯರು, ಮಂಚೂರಿಯಲ್ಲಿ ಇಲಿ ಮರಿ ಪತ್ತೆ
Image
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
Image
ಮಹಿಳೆಯರು ಬ್ಯಾಗ್​ನಲ್ಲಿ ಚಾಕು, ಮೆಣಸಿನ ಪುಡಿ ಇಟ್ಟುಕೊಂಡಿರಬೇಕು
Image
ಬೈಕ್​ಗೆ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

ಎಲ್‌ಪಿಜಿ ಸಿಲಿಂಡರ್ ಮರುಪೂರಣ ಯೋಜನೆಯಡಿ 26 ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ 55.95 ಕೋಟಿ ರೂ.ಗಳ ಅನುದಾನವನ್ನು ಅವರು ವರ್ಗಾಯಿಸಿದ್ದಾರೆ. ಇದರ ಅಡಿಯಲ್ಲಿ ಪ್ರತಿ ಸಿಲಿಂಡರ್‌ಗೆ ತಿಂಗಳಿಗೆ 450 ರೂ.ಗಳ ಸಬ್ಸಿಡಿ ನೀಡಲಾಗುತ್ತದೆ.

ಕಾಂಗ್ರೆಸ್ ತೀವ್ರ ಆಕ್ಷೇಪ

ಮುಖ್ಯಮಂತ್ರಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಿಎಂ ಯಾದವ್ ಘೋಷಣೆಯ ಬಗ್ಗೆ ಕಾಂಗ್ರೆಸ್ ನಾಯಕ ಆರಿಫ್ ಮಸೂದ್ ಕಳವಳ ವ್ಯಕ್ತಪಡಿಸಿದ್ದು, ಬಲವಂತದ ಧಾರ್ಮಿಕ ಮತಾಂತರದ ಅರ್ಥವೇನೆಂದು ಮೊದಲು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಭೋಪಾಲ್‌ನಲ್ಲಿ ಹುಡುಗಿಯರು ನಾಪತ್ತೆಯಾದ ಪ್ರಕರಣಗಳನ್ನು ಪರಿಹರಿಸುವಲ್ಲಿ ಸರ್ಕಾರದ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮಹಿಳೆಯರು ಬ್ಯಾಗ್​ನಲ್ಲಿ ಲಿಪ್​ಸ್ಟಿಕ್​ ಜತೆಗೆ ಚಾಕು, ಮೆಣಸಿನ ಪುಡಿ ಇಟ್ಟುಕೊಂಡಿರಬೇಕು

ಬಲವಂತದ ಮತಾಂತರ ಎಂದರೆ ಏನು ಎಂಬುದನ್ನು ಮೊದಲು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕ. ಅಲ್ಲದೆ, ಭೋಪಾಲ್‌ನಲ್ಲಿ ಅನೇಕ ಯುವತಿಯರು ಇತ್ತೀಚೆಗೆ ಕಾಣೆಯಾಗಿದ್ದಾರೆ. ಆ ಬಗ್ಗೆ ಸರ್ಕಾರ ಮೊದಲು ಗಮನಹರಿಸಲಿ ಎಂದು ಆರಿಫ್ ಮಸೂದ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:41 am, Mon, 10 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ