ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊರೊನಾ ಸೋಂಕು

ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಕೊರೊನಾ ಸೋಂಕು

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಶಿವರಾಜ್‌ ಸಿಂಗ್‌ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ನಾನು ಟೆಸ್ಟ್‌ ಮಾಡಿಸಿಕೊಂಡಿದ್ದೆ. ಈಗ ವರದಿ ಬಂದಿದ್ದು ನನಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಜೊತೆ ಕಳೆದ ಹತ್ತು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ತಕ್ಷಣವೇ ಪರೀಕ್ಷಿಸಿಕೊಂಡು ಮುಂದಿನ […]

Guru

| Edited By:

Jul 26, 2020 | 1:31 AM

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೆ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಶಿವರಾಜ್‌ ಸಿಂಗ್‌ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ನಾನು ಟೆಸ್ಟ್‌ ಮಾಡಿಸಿಕೊಂಡಿದ್ದೆ. ಈಗ ವರದಿ ಬಂದಿದ್ದು ನನಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಜೊತೆ ಕಳೆದ ಹತ್ತು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ತಕ್ಷಣವೇ ಪರೀಕ್ಷಿಸಿಕೊಂಡು ಮುಂದಿನ ಕ್ರಮಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಆದ್ರೆ ದಿನನಿತ್ಯದ ಅಧಿಕೃತ ಕೆಲಸ ಕಾರ್ಯಗಳನ್ನು ವಿಡಿಯೋ ಕಾನ್‌ಫೆರೆನ್ಸ್‌ ಮೂಲಕ ಮಾಡುತ್ತೆನೆ. ಕೆಲಸದ ವಿಷಯದಲ್ಲಿ ಯಾವುದೇ ಬಾಧಕವಿರುವುದಿಲ್ಲ ಎಂದು ತಿಳಿಸಿದ್ದಾರೆ.

Follow us on

Related Stories

Most Read Stories

Click on your DTH Provider to Add TV9 Kannada