Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಕಾಂಗ್ರೆಸ್​ನ ನೂತನ ರಾಜ್ಯಾಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ

ಮಧ್ಯಪ್ರದೇಶ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ರಾಜ್ಯಾಧ್ಯಕ್ಷರನ್ನು ಬದಲಿಸಿದೆ. ಕಮಲ್​ನಾಥ್(Kamal Nath) ಬದಲು ಮುಂದಿನ ರಾಜ್ಯಾಧ್ಯಕ್ಷರಾಗಿ ಒಬಿಸಿ ನಾಯಕ ಜಿತು ಪಟ್ವಾರಿ( Jitu Patwari) ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕಮಲ್ ನಾಥ್ ಅವರು ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಧ್ಯಪ್ರದೇಶ ಕಾಂಗ್ರೆಸ್​ನ ನೂತನ ರಾಜ್ಯಾಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ
ಜಿತು ಪಟ್ವಾರಿImage Credit source: Hari Bhoomi
Follow us
ನಯನಾ ರಾಜೀವ್
|

Updated on: Dec 17, 2023 | 10:59 AM

ಮಧ್ಯಪ್ರದೇಶ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ರಾಜ್ಯಾಧ್ಯಕ್ಷರನ್ನು ಬದಲಿಸಿದೆ. ಕಮಲ್​ನಾಥ್(Kamal Nath) ಬದಲು ಮುಂದಿನ ರಾಜ್ಯಾಧ್ಯಕ್ಷರಾಗಿ ಒಬಿಸಿ ನಾಯಕ ಜಿತು ಪಟ್ವಾರಿ( Jitu Patwari) ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕಮಲ್ ನಾಥ್ ಅವರು ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬುಡಕಟ್ಟು ಜನಾಂಗದ ನಾಯಕ ಉಮೇಶ್ ಸಿಂಘಾರ್ ಅವರನ್ನು ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಕಾಂಗ್ರೆಸ್ ಮಾಡಿದೆ. ಪಟ್ವಾರಿ ಅವರು ಕಮಲ್ ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದರು. ಅವರು ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಕೂಡ ಇದೇ ಪ್ರದೇಶದಿಂದ ಬಂದವರು. ಜಿತು ಪಟ್ವಾರಿ ಕೂಡ ಒಬಿಸಿ ಸಮುದಾಯದಿಂದ ಬಂದವರು ಮತ್ತು ರಾಹುಲ್ ಗಾಂಧಿಗೆ ಆಪ್ತರಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನವೆಂಬರ್ 17ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.

ಮತ್ತಷ್ಟು ಓದಿ: ಮಧ್ಯಪ್ರದೇಶ: ಚುನಾವಣಾ ಸೋಲಿನ ಬಳಿಕ ಕಮಲ್​ನಾಥ್ ರಾಜೀನಾಮೆ ಒತ್ತಾಯಿಸಿತೇ ಕಾಂಗ್ರೆಸ್​?

ಸೆಪ್ಟೆಂಬರ್ 3ರಂದು ಮತ ಎಣಿಕೆ ನಡೆದಿತ್ತು. 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮರಳಿ ಅಧಿಕಾರ ಪಡೆದಿತ್ತು. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್​ ಮುಖ್ಯಸ್ಥರನ್ನು ಬದಲಾವಣೆ ಮಾಡಿದೆ.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು 90 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯ 54 ವಿರುದ್ಧ 35 ಸ್ಥಾನಗಳನ್ನು ಪಡೆದಿದೆ, ಪಕ್ಷವು ದೀಪಕ್ ಬೈಜ್ ಅವರನ್ನು ರಾಜ್ಯ ಘಟಕದ ಮುಖ್ಯಸ್ಥರಾಗಿ ಮುಂದುವರಿಸಲು ನಿರ್ಧರಿಸಿದೆ. ಛತ್ತೀಸ್‌ಗಢ ವಿಧಾನಸಭೆಯ ಮಾಜಿ ಸ್ಪೀಕರ್ ಚರಣ್ ದಾಸ್ ಮಹಂತ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಕ ಮಾಡಿದೆ.

ಮಹಂತ್ ಒಬಿಸಿ ನಾಯಕರಾಗಿದ್ದು, ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆದ ಈ ವರ್ಷದ ಚುನಾವಣೆಯಲ್ಲಿ 12,000 ಮತಗಳ ಅಂತರದಿಂದ ಬಿಜೆಪಿಯ ಖಿಲಾವನ್ ಸಾಹು ಅವರನ್ನು ಸೋಲಿಸುವ ಮೂಲಕ ಸ್ಥಾನವನ್ನು ಉಳಿಸಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ