ಕೋಲ್ಡ್ರಿಫ್ ಸಿರಪ್ ಸೇವಿಸಿ ಇಲ್ಲಿವರೆಗೆ 20 ಮಕ್ಕಳು ಸಾವು: ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಮಾಲೀಕನ ಬಂಧನ
ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್(Cough syrup) ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಹಲವಾರು ಮಕ್ಕಳ ಸಾವಿಗೆ ಕೋಲ್ಡ್ರಿಫ್ ಕಾರಣ ಎಂದು ತಿಳಿದುಬಂದಿದೆ. ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಯಿತು. ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಭೋಪಾಲ್, ಅಕ್ಟೋಬರ್ 09: ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್(Cough syrup) ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಹಲವಾರು ಮಕ್ಕಳ ಸಾವಿಗೆ ಕೋಲ್ಡ್ರಿಫ್ ಕಾರಣ ಎಂದು ತಿಳಿದುಬಂದಿದೆ. ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಯಿತು. ಬುಧವಾರ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಮಧ್ಯಪ್ರದೇಶದ ಛಿಂದ್ವಾರಾ ಪೊಲೀಸರು ರಂಗನಾಥನ್ ಹಿಡಿದುಕೊಟ್ಟವರಿಗೆ 20 ಸಾವಿರ ನೀಡುವುದಾಗಿ ಘೋಷಿಸಿದ್ದರು, ಇದಾದ ಕೆಲವೇ ಗಂಟೆಗಳಲ್ಲಿ ಅವರ ಬಂಧನವಾಗಿದೆ. ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವಿನ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಇನ್ನೂ ಮೂರು ಮಕ್ಕಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ. ಐದು ಮಕ್ಕಳು ನಾಗ್ಪುರದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರು ಈ ದುರದೃಷ್ಟಕರ ಘಟನೆಯಲ್ಲಿ ಛಿಂದ್ವಾರ, ಪಂಧುರ್ನಾ ಮತ್ತು ಬೇತುಲ್‌ನಲ್ಲಿ 20 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದ್ದಾರೆ.
ಮತ್ತಷ್ಟು ಓದಿ: ಸಾಲು ಸಾಲು ಮಕ್ಕಳ ಸಾವಿನ ನಂತರ ಕೆಮ್ಮು ಸಿರಪ್‌ಗಳ ಕಟ್ಟುನಿಟ್ಟಿನ ಪರೀಕ್ಷೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ
ತಾಮಿಯಾದ ಧನಿ ಡೆಹರಿಯಾ (1.5 ವರ್ಷ), ಜುನ್ನಾರ್‌ದೇವ್‌ನ ಜ್ಯಾನ್ಶು ಯದುವಂಶಿ (2 ವರ್ಷ) ಮತ್ತು ರಿಧೋರಾದ ವೇದಾಂಶ್ ಪವಾರ್ (2.5 ವರ್ಷ) ನಾಗ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ.ಈ ಸಾವುಗಳೊಂದಿಗೆ ಚಿಂದ್ವಾರ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 17 ಕ್ಕೆ ತಲುಪಿದೆ.
ಪಂಧುರ್ನಾದಲ್ಲಿ ಈಗಾಗಲೇ ಒಂದು ಮಗು ಸಾವನ್ನಪ್ಪಿದೆ. ಬೇತುಲ್‌ನಲ್ಲಿ ಎರಡು ಮಕ್ಕಳು ಸಹ ಸಾವನ್ನಪ್ಪಿದ್ದಾರೆ. ನಾಗ್ಪುರದ ಆಸ್ಪತ್ರೆಗಳಲ್ಲಿ ಐದು ಮಕ್ಕಳು ಇನ್ನೂ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಡಾ. ಪ್ರವೀಣ್ ಸೋನಿ ಸೇರಿದಂತೆ ಕೆಲವು ಖಾಸಗಿ ವೈದ್ಯರು ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. ಸಿರಪ್ ಸೇವಿಸಿದ ಕೆಲವೇ ಗಂಟೆಗಳಲ್ಲಿ, ಮಕ್ಕಳ ಮೂತ್ರಪಿಂಡ ಸಮಸ್ಯೆಯಿಂದ ಬಳಲಲು ಪ್ರಾರಂಭಿಸಿದವು ಮತ್ತು ಅವರ ಸ್ಥಿತಿ ಹದಗೆಡುತ್ತಲೇ ಇತ್ತು.
ವೈದ್ಯಕೀಯ ಪರೀಕ್ಷೆಗಳು ಸಿರಪ್‌ನಲ್ಲಿ ವಿಷಕಾರಿ ರಾಸಾಯನಿಕಗಳಿರುವುದನ್ನು ದೃಢಪಡಿಸಿವೆ. ಅದು ದೇಹಕ್ಕೆ ಪ್ರವೇಶಿಸಿದಾಗ ಮೂತ್ರಪಿಂಡಗಳಿಗೆ ಹಾನಿಯಾಗುತ್ತಿತ್ತು. ಅದಕ್ಕಾಗಿಯೇ ಅನೇಕ ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:16 am, Thu, 9 October 25




