
ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ (Jabalpur) ಜಿಲ್ಲೆಯಲ್ಲಿ ಇಂದು ಮರಳು ಗಣಿಗಾರಿಕೆ (Sand Mining) ವೇಳೆ ಮಹಿಳೆ ಮತ್ತು ಆಕೆಯ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರು ಗಾಯಗೊಂಡಿರುವ ದಾರುಣ ಘಟನೆ (Shocking News) ನಡೆದಿದೆ. ಕತ್ರಾ ರಾಮ್‌ಖಿರಿಯಾ ಗ್ರಾಮದ ನದಿ ತೀರದಲ್ಲಿ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ ತಿಳಿಸಿದ್ದಾರೆ.
ಮೃತರನ್ನು ಮುನ್ನಿ ಬಾಯಿ (50), ಅವರ ಮಗ ಮುಖೇಶ್ (35) ಮತ್ತು ರಾಜ್‌ಕುಮಾರ್ ಖಟಿಕ್ (25) ಎಂದು ಗುರುತಿಸಲಾಗಿದೆ. ಈ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣಕ್ಕಾಗಿ ಕೆಲವರು ಮರಳು ಅಗೆಯುತ್ತಿದ್ದಾಗ ಅವರ ಮೇಲೆ ಬೃಹತ್ ಮರಳಿನ ಗುಡ್ಡ ಕುಸಿದು ಬಿದ್ದಿದ್ದು, ಗಾಯಗೊಂಡಿರುವ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಮಧ್ಯಪ್ರದೇಶ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಸಾವು
ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ಕಂದಾಯ ಅಧಿಕಾರಿ ಟ್ರ್ಯಾಕ್ಟರ್ ಟ್ರಾಲಿಗೆ ತುಳಿದು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಪಟ್ವಾರಿ ಎಂದು ಕರೆಯಲ್ಪಡುವ ಸ್ಥಳೀಯ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್-ಟ್ರಾಲಿಯ ಅಡಿಗೆ ಸಿಲುಕಿ ಸಾವನ್ನಪ್ಪಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ