AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿದ ಮುಖ್ಯೋಪಾಧ್ಯಾಯರು

ತಮ್ಮ ನಡವಳಿಕೆಯಿಂದ ಮಕ್ಕಳ ಮೇಲೆ ಯಾವ ರೀತಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನುವ ಕಿಂಚಿತ್ತೂ ಅರಿವಿಲ್ಲದೆ ಮುಖ್ಯೋಪಾಧ್ಯಾಯರೊಬ್ಬರು ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳಲ್ಲಿ ಆತಂಕ ಸೃಷ್ಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮದ್ಯದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿದ ಮುಖ್ಯೋಪಾಧ್ಯಾಯರು
ಶಿಕ್ಷಕರು
ನಯನಾ ರಾಜೀವ್
|

Updated on: Jul 08, 2024 | 11:43 AM

Share

ಮುಖ್ಯೋಪಾಧ್ಯಾಯರೊಬ್ಬರು ಮದ್ಯದ ಅಮಿಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪಾನಮತ್ತರಾಗಿ ಬಂದಿದ್ದ ಶಿಕ್ಷಕರು ಮಕ್ಕಳಿಗೆ ರಜೆ ಕೊಟ್ಟು ಕಳುಹಿಸಿದ್ದಾರೆ. ಅಲ್ಲೇ ನೆಲದ ಮೇಲೆ ನಿದ್ದೆಗೆ ಜಾರಿದ್ದಾರೆ. ಈ ಘಟನೆ ರೇವಾದಲ್ಲಿ ನಡೆದಿದೆ.

ಮುಖ್ಯೋಪಾಧ್ಯಾಯರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಖ್ಯೋಪಾಧ್ಯಾಯರು ಕುಡಿದು ಶಾಲೆಯೊಳಗೆ ಮಲಗಿದ್ದಾರೆ, ಈ ಮುಖ್ಯೋಪಾಧ್ಯಾಯರ ಹೆಸರು ರಮಾಕಾಂತ್.

ಪಾನಮತ್ತರಾಗಿ ಶಾಲೆಗೆ ಆಗಮಿಸಿ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಓಡಿಸಿ ಅಲ್ಲಿಯೇ ಹರಡಿದ್ದ ಗೋಣಿಚೀಲದ ಮೇಲೆಯೇ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆಗೊಂಡಿರುವ ಮುಖ್ಯೋಪಾಧ್ಯಾಯ ರಮಾಕಾಂತ್ ವರ್ಮಾ ನಿತ್ಯ ಇದೇ ರೀತಿ ನಡೆದುಕೊಳ್ಳುತ್ತಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಶಿಕ್ಷಣ ಸಚಿವರ ಎಚ್ಚರಿಕೆ ನಂತರವೂ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ ದೈಹಿಕ ಶಿಕ್ಷಕ

ಹಲವು ಬಾರಿ ಮುಖ್ಯೋಪಾಧ್ಯಾಯರು ಶಾಲೆಯ ತರಗತಿ ಕೊಠಡಿಯಲ್ಲಿಯೇ ಮಲಗುತ್ತಿದ್ದರು. ಇವರ ನಡವಳಿಕೆಯಿಂದ ಮಕ್ಕಳು ಹಾಗೂ ಅವರ ಪೋಷಕರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿರುವ ಮಹಿಳಾ ಶಿಕ್ಷಕಿಯೂ ಆತಂಕಕ್ಕೊಳಗಾಗಿದ್ದಾರೆ.

ವೈರಲ್ ಆಗಿರುವ ವಿಡಿಯೋ ನಮ್ಮ ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ತಿಳಿಸಿದ್ದಾರೆ. ತನಿಖೆಯ ನಂತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಶಿಕ್ಷಕರು ಮದ್ಯ ಸೇವಿಸಿ ತರಗತಿಗೆ ಬಂದಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

ಇದರೊಂದಿಗೆ ಶಾಲೆಯಲ್ಲಿ ಯಾವುದೇ ರೀತಿಯ ಅಶಿಸ್ತು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಂತಹವರ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಯಾವುದೇ ಶಿಕ್ಷಕರು ಮದ್ಯಪಾನ ಮಾಡುವ ಚಟ ಹೊಂದಿದ್ದರೆ ಅಂತಹವರು ಶಿಕ್ಷಣ ಇಲಾಖೆಯಲ್ಲಿ ಇರಬಾರದು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ