AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; 8 ವರ್ಷದ ಬಾಲಕಿ ಸಾವು, ಐವರ ಸ್ಥಿತಿ ಗಂಭೀರ

ಖಜೂರಿ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಗುತ್ತಿಗೆದಾರನಾಗಿದ್ದ 40 ವರ್ಷದ ಕಿಶೋರ್ ಜಾಧವ್ ಹಣಕಾಸಿನ ಸಮಸ್ಯೆಗಳಿಂದಾಗಿ ಬಹಳ ಒತ್ತಡಕ್ಕೊಳಗಾಗಿದ್ದರು.

ಬಡತನದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; 8 ವರ್ಷದ ಬಾಲಕಿ ಸಾವು, ಐವರ ಸ್ಥಿತಿ ಗಂಭೀರ
ಆತ್ಮಹತ್ಯೆಗೆ ಯತ್ನಿಸಿದ ಮಧ್ಯಪ್ರದೇಶದ ಕುಟುಂಬImage Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Jan 12, 2023 | 6:38 PM

Share

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ (Bhopal) ಬಡತನದಿಂದ ಬಳಲುತ್ತಿದ್ದ ಕುಟುಂಬವೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಮನೆಯಲ್ಲಿರುವ 6 ಜನರ ಕುಟುಂಬ ಇಂದು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಖಜೂರಿ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಗುತ್ತಿಗೆದಾರನಾಗಿದ್ದ 40 ವರ್ಷದ ಕಿಶೋರ್ ಜಾಧವ್ ಹಣಕಾಸಿನ ಸಮಸ್ಯೆಗಳಿಂದಾಗಿ ಬಹಳ ಒತ್ತಡಕ್ಕೊಳಗಾಗಿದ್ದರು. ಇದರಿಂದ ಅವರು ಮನೆಯವರೆಲ್ಲರಿಗೂ ವಿಷ ನೀಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಆದರೆ, ದುರದೃಷ್ಟವಶಾತ್ ಕಿಶೋರ್ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ

ಬುಧವಾರ ಕಿಶೋರ್ ಮತ್ತು ಅವರ 35 ವರ್ಷದ ಪತ್ನಿ ಸೀತಾ ವಿಷ ಸೇವಿಸಿ ತಮ್ಮ ಮಕ್ಕಳಾದ ಕಾಂಚನ್ (15), ಪೂರ್ವಾ (8), ಅಣ್ಣು (10) ಮತ್ತು ಅಭಯ್ (12) ಅವರಿಗೆ ವಿಷ ಮಿಶ್ರಿತ ಹಾಲನ್ನು ಕುಡಿಸಿದ್ದರು. ಜೋರಾಗಿ ಕಿರುಚಾಡುತ್ತಿದ್ದ ಅವರನ್ನು ಅಕ್ಕಪಕ್ಕದವರು ಆಸ್ಪತ್ರೆಗೆ ಸೇರಿಸಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಂದು ಬೆಳಗ್ಗೆ 8 ವರ್ಷದ ಪೂರ್ವಾ ಸಾವನ್ನಪ್ಪಿದ್ದು, ಉಳಿದ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಅವರ ಪೋಷಕರು ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು