AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಐದು ಜನ ಸಾವು

Madhya Pradesh Accident: ಇಂದು ಮುಂಜಾನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಐದು ಜನ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಈ ಘಟನೆ ಸಂಭವಿಸಿದೆ

ಮಧ್ಯಪ್ರದೇಶ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಐದು ಜನ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 25, 2023 | 10:22 AM

Share

ಭೋಪಾಲ್, ಸೆ.25: ಇಂದು ಮುಂಜಾನೆ ಮಧ್ಯಪ್ರದೇಶ(Madhya Pradesh) ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಐದು ಜನ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕಾರು ಉಮಾರಿಯಾದಿಂದ ಶಹದೋಲ್‌ಗೆ ತೆರಳುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದು, ಡಿಕ್ಕಿ ಹೊಡೆದ ಪರಿಣಾಮ ಮೂರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಯುವ ಬಸ್ ಕಂಡಕ್ಟರ್​​ ಸಾವು

ಸಾವನ್ನಪ್ಪಿರುವವರನ್ನು 30-35 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು. ಇದರಲ್ಲಿ 3 ಜನ ಸರ್ಕಾರಿ ಉದ್ಯೋಗಿಗಳು ಎಂದು ಪೊಲೀಸ್​​ ವರದಿ ತಿಳಿಸಿದೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಜತೆಗೆ ಸಾವನ್ನಪ್ಪಿರುವವರನ್ನು ಗುರುತಿಸಿ ಮರಣೋತ್ತರ ಪರೀಕ್ಷೆ ನಂತರ ಅವರ ಮನೆಯವರಿಗೆ ತಿಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!