ಭೋಪಾಲ್, ಸೆ.25: ಇಂದು ಮುಂಜಾನೆ ಮಧ್ಯಪ್ರದೇಶದ (Madhya Pradesh) ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಐದು ಜನ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕಾರು ಉಮಾರಿಯಾದಿಂದ ಶಹದೋಲ್‌ಗೆ ತೆರಳುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದು, ಡಿಕ್ಕಿ ಹೊಡೆದ ಪರಿಣಾಮ ಮೂರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಯುವ ಬಸ್ ಕಂಡಕ್ಟರ್ ಸಾವು
ಸಾವನ್ನಪ್ಪಿರುವವರನ್ನು 30-35 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು. ಇದರಲ್ಲಿ 3 ಜನ ಸರ್ಕಾರಿ ಉದ್ಯೋಗಿಗಳು ಎಂದು ಪೊಲೀಸ್ ವರದಿ ತಿಳಿಸಿದೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಜತೆಗೆ ಸಾವನ್ನಪ್ಪಿರುವವರನ್ನು ಗುರುತಿಸಿ ಮರಣೋತ್ತರ ಪರೀಕ್ಷೆ ನಂತರ ಅವರ ಮನೆಯವರಿಗೆ ತಿಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ