ನ್ಯಾಯಾಲಯದ ಆವರಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಅಲ್ಲಿನ ಜಿಲ್ಲಾ ನ್ಯಾಯಾಲಯದ ಕಟ್ಟಡ ಹತ್ತಿ ನಾಲ್ಕನೇ ಮಹಡಿಯಿಂದ ಹಾರಲು ಯತ್ನಿಸಿದ್ದಾಳೆ, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಇತರೆ ಜನರು ಯುವತಿಯನ್ನು ಕಟ್ಟಡದಿಂದ ಜಿಗಿಯದಂತೆ ತಡೆದಿದ್ದಾರೆ, ನಂತರ ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಯಿತು.ಸದ್ಯ ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆತ್ಮಹತ್ಯೆಯಂತಹ ತಪ್ಪು ನಿರ್ಧಾರಕ್ಕೆ ಕಾರಣಗಳು ತಿಳಿದುಬಂದಿಲ್ಲ. ಈ ಕುರಿತು ತನಿಖೆ ಆರಂಭಿಸಲಾಗಿದೆ.
ಅಟಲ್ ಸೇತುವೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನ
ದೇಶದ ಉದ್ದನೆಯ ಸಾಗರ ಸೇತುವೆ ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ಸೇವರಿ ನ್ಹಾವಾ ಶೇವಾ ಅಟಲ್ ಸೇತುವೆಯಿಂ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಟಲ್ ಸೇತುವಿನ ತಡೆಗೋಡೆ ಮೇಲಿಂದ ಜಿಗಿಯಲು ಯತ್ನಿಸಿದ ಮಹಿಳೆಯನ್ನು ಕಾರಿನ ಚಾಲಕ ಮತ್ತು ಪೊಲೀಸ್ ಅಧಿಕಾರಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು
ಎಂಟಿಎಚ್‌ಎಲ್ ಅಟಲ್ ಸೇತುವಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನಿಸುತ್ತಿದ್ದರು. ಕರ್ತವ್ಯದಲ್ಲಿದ್ದ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಲಲಿತ್ ಶಿರ್ಸತ್, ಕಿರಣ್ ಮಹ್ತ್ರೆ, ಕಾನ್‌ಸ್ಟೆಬಲ್‌ಗಳಾದ ಯಶ್ ಸೋನಾವಾನೆ ಮತ್ತು ಮಯೂರ್ ಪಾಟೀಲ್ ಅವರು ಮಹಿಳೆಯನ್ನು ರಕ್ಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ