ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಅಪಘಾತ ಪರಿಹಾರ ವಾಹನದೊಂದಿಗೆ ತಡರಾತ್ರಿ ಸ್ಥಳಕ್ಕೆ ತಲುಪಿದರು. ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರೊಳಗೆ ರೇಕ್‌ಗಳನ್ನು ಖಾಲಿ ಮಾಡಲು ಹೋದಾಗ ಗೂಡ್ಸ್ ರೈಲಿನಿಂದ ಎರಡು ವ್ಯಾಗನ್‌ಗಳು ಎಲ್‌ಪಿಜಿ ರೇಕ್‌ಗಳು ಹಳಿತಪ್ಪಿದವು.
ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ
ಈಸ್ಟ್ ಕೋಸ್ಟ್ ರೈಲ್ವೆ ಅಧೀನದಲ್ಲಿರುವ ಖುರ್ದಾ ರಸ್ತೆ ವಿಭಾಗದ ಡಿಆರ್‌ಎಂ ರಿಂಕೇಶ್ ರೇ, ತನಗೆ ಬಂದಿರುವ ಮಾಹಿತಿಯ ಪ್ರಕಾರ, ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದ ಕುರಿತು ಸಿಬಿಐ ತನಿಖೆ ಪ್ರಾರಂಭವಾಗಿದೆ ಎಂದು ಹೇಳಿದರು. ಆದರೆ ವಿವರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ